ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ವೈದ್ಯಕೀಯ ಕೋರ್ಸ್: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ ಸುಪ್ರೀಂ ಆದೇಶ, 2 ಹಂತಗಳಲ್ಲಿ ಪರೀಕ್ಷೆ

ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಏಕೈಕ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ...

ಸಾಂದರ್ಭಿಕ ಚಿತ್ರ
Lingaraj Badiger
Updated On : 28 Apr 2016, 6:07 am
ನವದೆಹಲಿ: ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಏಕೈಕ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್​ಇಇಟಿ) ನಡೆಸಲು ಸುಪ್ರೀಂಕೋರ್ಟ್ ಗುರುವಾರ ಒಪ್ಪಿಗೆ ನೀಡಿದ್ದು, ಎಂಬಿಬಿಎಸ್, ಬಿಡಿಎಸ್ ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್​ಗಳಿಗೆ ಎನ್ ಇಇಟಿ ಮೂಲಕ ಎರಡು ಹಂತಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಕೇಂದ್ರ ಮತ್ತು ಸಿಬಿಎಸ್​ಗೆ ಸೂಚಿಸಿದೆ.
ಮೇ 1ರಂದು ನಡೆಯಲಿರುವ ಎಐಪಿಎಂಟಿ ಪರೀಕ್ಷೆಯನ್ನು ಎನ್​ಇಇಟಿಯ ಮೊದಲ ಹಂತದ ಪರೀಕ್ಷೆ ಎಂದು ಪರಿಗಣಿಸಲಾಗುವುದು ಮತ್ತು ಎರಡನೇ ಹಂತದ ಪರೀಕ್ಷೆಯನ್ನು ಜುಲೈ 24ರಂದು ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಎನ್​ಇಇಟಿ ವಿರೋಧಿಸಿ ರಾಜ್ಯ ಸರ್ಕಾರಗಳು ಹಾಗೂ ಖಾಸಗಿ ಕಾಲೇಜುಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಸುಪ್ರೀಂಕೋರ್ಟಿನ ಈ ತೀರ್ಪಿನ ಪರಿಣಾಮವಾಗಿ ಮುಂದಿನ ತಿಂಗಳು ನಡೆಯಬೇಕಾಗಿದ್ದ ಎಲ್ಲಾ ರೀತಿಯ ವೈದ್ಯಕೀಯ ಪ್ರವೇಶ ಪರೀಕ್ಷೆಗಳೂ ಈಗ ರದ್ದುಗೊಂಡಿವೆ.

Advertisement

Advertisement

ಎರಡು ಹಂತಗಳ ಎನ್ ಇಇಟಿ ಪರೀಕ್ಷೆಯ ಅಂತಿಮ ಫಲಿತಾಂಶ ಆಗಸ್ಟ್ 17ರ ವೇಳೆಗೆ ಪ್ರಕಟವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement