ಸುಪ್ರೀಂ ಕೋರ್ಟ್ 
ಪ್ರಧಾನ ಸುದ್ದಿ

ಮಹದಾಯಿ ನ್ಯಾಯಾಧಿಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನವದೆಹಲಿ: ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನ್ಯಾಯಾಧಿಕರರಣದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಅವರು ಶುಕ್ರವಾರ ಹೇಳಿದ್ದಾರೆ.
ಕರ್ನಾಟಕ ಪರ ವಕೀಲ ಫಾಲಿ ಎಸ್‌. ನಾರಿಮನ್‌ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ. ಪಾಟೀಲ್ ಅವರು, ಹಿರಿಯ ವಕೀಲ ನಾರಿಮನ್ ಸಲಹೆಯಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಆದರೆ ನ್ಯಾಯಾಧಿಕರಣ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿ ರಾಜ್ಯದ ಅರ್ಜಿಯನ್ನು ವಜಾಗೊಳಿಸಿತ್ತು. 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್