ಜಿ ಪರಮೇಶ್ವರ 
ಪ್ರಧಾನ ಸುದ್ದಿ

ಅಮ್ನೆಸ್ಟಿ ಪರ ಗೃಹ ಸಚಿವ ಪರಮೇಶ್ವರ ಬ್ಯಾಟಿಂಗ್

ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ದೇಶ ವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ವಿವಾದಿತ ಅಮ್ನೆಸ್ಟಿ ಇಂಡಿಯಾ...

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ದೇಶ ವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ವಿವಾದಿತ ಅಮ್ನೆಸ್ಟಿ ಇಂಡಿಯಾ ಪರ ಬ್ಯಾಟಿಂಗ್ ಮಾಡುವ ಮೂಲಕ ಎಬಿವಿಪಿ ಪ್ರತಿಭಟನೆಗೆ ತುಪ್ಪ ಸುರಿದಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಅಮ್ನೆಸ್ಟಿ ಇಂಡಿಯಾ ಸಂಸ್ಥೆ ದೇಶದ್ರೋಹದ ಕೆಲಸ ಮಾಡಿದೆ ಅಂತ ಅನಿಸುತ್ತಿಲ್ಲ. ಕಾಶ್ಮೀರದಲ್ಲಿ ಹಿಂಸಾಚಾರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಶ್ಮೀರಿಗಳಿಗೆ ಧೈರ್ಯ ತುಂಬಲು ಅಮ್ನೆಸ್ಟಿ ಇಂಡಿಯಾ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಆದರೆ ಎಬಿವಿಪಿ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವರು ವಿದೇಶದಲ್ಲಿ ಭಾಷಣ ಮಾಡುವ ಮೋದಿ ದೇಶದ ಹಾಗೂ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಅಮ್ನೆಸ್ಟಿ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT