ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಟಾಂಗ್ ನೀಡುವ ಭರದಲ್ಲಿ ಪಾಕಿಸ್ತಾನ ನರಕ ಅಲ್ಲ. ಅಲ್ಲಿನ ಜನ ತುಂಬಾ ಒಳ್ಳೆಯವರು ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಯೂ ಟರ್ನ್ ಹೊಡೆದಿದ್ದಾರೆ.
ಪಾಕಿಸ್ತಾನಕ್ಕೆ ನಾವು ಭೇಟಿ ನೀಡಿದಾಗ ಆ ದೇಶದವರು ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ. ಅದನ್ನು ನಾನು ಉಲ್ಲೇಖಿಸಿದ್ದೇನೆ ಅಷ್ಟೇ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಾನು ದ್ವೇಷಿಸುವುದಿಲ್ಲ. ಆದರೆ, ಕೆಲವು ವಿಚಾರಗಳಲ್ಲಿ ಅವರೊಂದಿಗೆ ನನಗೆ ಭಿನ್ನಾಭಿಪ್ರಾಯ ಇದೆ. ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ನಮಗೆ ಒಳ್ಳೆಯ ಸತ್ಕಾರ ನೀಡಿದ್ದಾರೆ. ಉತ್ತಮವಾಗಿ ನಡೆಸಿಕೊಂಡಿದ್ದಾರೆ. ಅದನ್ನು ನಾನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.