ಅರವಿಂದ್ ಜಾಧವ್ 
ಪ್ರಧಾನ ಸುದ್ದಿ

ಭೂಕಬಳಿಕೆ ಆರೋಪ: ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ವಿರುದ್ಧ ಎಸಿಬಿಗೆ ದೂರು

ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರ ವಿರುದ್ಧ ಆರ್ ಟಿಐ...

ಬೆಂಗಳೂರು: ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರ ವಿರುದ್ಧ ಆರ್ ಟಿಐ ಕಾರ್ಯಕರ್ತರೊಬ್ಬರು ಮಂಗಳವಾರ ಎಸಿಬಿಗೆ ದೂರು ನೀಡಿದ್ದಾರೆ. 
ಜಾಧವ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ತಾಯಿ ತಾರಾಭಾಯ್ ಹೆಸರಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಆರ್ ಟಿ ಐ ಕಾರ್ಯಕರ್ತ ಎಸ್.ಭಾಸ್ಕರನ್ ಅವರು ಇಂದು ಎಸಿಬಿಗೆ ನೀಡಿದ್ದಾರೆ. ಅಲ್ಸದೆ ಭೂಮಿ ಕಬಳಿಕೆಗೆ ಸಹಕರಿಸದ ಅಧಿಕಾರಿಗಳನ್ನು ಜಾಧವ್ ಅವರು ವರ್ಗಾಯಿಸಿರುವುದಾಗಿ ದೂರಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕು ಸರ್ಜಾಪುರ ಹೋಬಳಿಯ ರಾಮನಾಯಕನಹಳ್ಳಿಯ ಸರ್ವೇ ಸಂಖ್ಯೆ 29ರಲ್ಲಿ 74 ಎಕರೆ ಸರ್ಕಾರಿ ಜಮೀನಿದೆ. ಈ ಪೈಕಿ 8.30 ಎಕರೆ ತಮ್ಮ ತಾಯಿಗೆ ಮಂಜೂರಾಗಿದ್ದು, ಇದಕ್ಕೆ ದಾಖಲೆ ನೀಡುವಂತೆ ಜಿಲ್ಲಾಧಿಕಾರಿಗೆ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್‌ ಸೂಚಿಸಿದರು. ಈ 8.30 ಎಕರೆ ಸೇರಿ ಒಟ್ಟು 66 ಎಕರೆ ಜಮೀನನ್ನು ವಿವಿಧ "ಫ‌ಲಾನುಭವಿ'ಗಳಿಗೆ ನೀಡಲು ಅಕ್ರಮವಾಗಿ ದಾಖಲೆ ಸೃಷ್ಟಿಗೆ ಹಲವು ಹಂತಗಳಲ್ಲಿ ಸಿದ್ಧತೆ ನಡೆಯುತ್ತಿದ್ದಂತೆ, ಸರ್ವೇ ಇಲಾಖೆ ಅಧಿಕಾರಿಯಿಂದ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕೋಪಗೊಂಡ ಮುಖ್ಯ ಕಾರ್ಯದರ್ಶಿ, ಅಧಿಕಾರಿಯನ್ನು ವರ್ಗಾಯಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!