ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ 
ಪ್ರಧಾನ ಸುದ್ದಿ

ಆರ್ ಎಸ್ ಎಸ್ ಪಾತ್ರದ ಬಗ್ಗೆ ರಾಹುಲ್ ಯು-ಟರ್ನ್ ಮಾಡಿಲ್ಲ: ದಿಗ್ವಿಜಯ್

ಮಹಾತ್ಮಾ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಸಂಘಟನೆ ಕಾರಣ ಎಂಬ ಹೇಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಯು-ಟರ್ನ್ ತೆಗೆದುಕೊಂಡಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿರುವ

ನವದೆಹಲಿ: ಮಹಾತ್ಮಾ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಸಂಘಟನೆ ಕಾರಣ ಎಂಬ ಹೇಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಯು-ಟರ್ನ್ ತೆಗೆದುಕೊಂಡಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್, ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದಾರೆ.
"ಆರ್ ಎಸ್ ಎಸ್ ಬಗ್ಗೆ ರಾಹುಲ್ ಗಾಂಧಿ ಯು-ಟರ್ನ್ ಮಾಡಿಲ್ಲ. ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಗಾಂಧಿ ಕೊಂದವನು ಆರ್ ಎಸ್ ಎಸ್ ನವನು. ದ್ವೇಷದ ಮತ್ತು ಹಿಂಸೆಯ ಸಿದ್ಧಾಂತ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ್ದು" ಎಂದು ಸರಣಿ ಟ್ವೀಟ್ ಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. 
ಮಹಾತ್ಮಾ ಗಾಂಧಿ ಹತ್ಯೆಗೆ ಆರ್ ಎಸ್ ಎಸ್ ಒಂದು ಸಂಸ್ಥೆಯಾಗಿ ಕಾರಣ ಎಂದು ನಾನು ದೂಷಿಸಲಿಲ್ಲ ಆದರೆ ಜನರು ಆ ಸಂಬಂಧ ಕಲ್ಪಿಸಿದರು ಎಂದು ರಾಹುಲ್ ಗಾಂಧಿ ಪರವಾಗಿ ವಕೀಲರು ನೆನ್ನೆ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದ್ದರು. 2015 ರ ಮಹಾರಾಷ್ಟ್ರ ಚುನಾವಣಾ ರ್ಯಾಲಿಯಲ್ಲಿ ಆರ್ ಎಸ್ ಎಸ್ ವಿರುದ್ಧ ಈ ಆರೋಪ ಮಾಡಿದ್ದರು ಎಂಬ ಕಾರಣಕ್ಕ ಆರ್ ಎಸ್ ಎಸ್ ಕಾರ್ಯಕರ್ತ ರಾಹುಲ್ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದರು ಮತ್ತು ಬಾಂಬೆ ಹೈಕೋರ್ಟ್ ಇದಕ್ಕೆ ಸಮನ್ಸ್ ನೀಡಿತ್ತು. ಈ ಸಮನ್ಸ್ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು. 
ಹೈಕೋರ್ಟ್ ಗೆ ಸಲ್ಲಿಸಿದ್ದ ಅಫಿಡವಿಟ್ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದ ರಾಹುಲ್ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಆರ್ ಎಸ್ ಎಸ್ ನ ಕೆಲವು ಜನ ಮಹಾತ್ಮಾ ಗಾಂಧಿ ಹತ್ಯೆಗೆ ಕಾರಣ ಎಂದು ರಾಹುಲ್ ಗಾಂಧಿ ಹೇಳಿದ್ದರು ಸಂಸ್ಥೆಯನ್ನು ದೂರಿರಲಿಲ್ಲ ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!