ಪ್ರಧಾನ ಸುದ್ದಿ

ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣ: ಮಾಜಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಗೆ ಸಮನ್ಸ್

Lingaraj Badiger
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರಿಗೆ ಶನಿವಾರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಸಂಬಂಧ ಆಗಸ್ಟ್ 30ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಇಂದು ಸಮನ್ಸ್ ಜಾರಿ ಮಾಡಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಸ್ಕರ್ ರಾವ್ ಅವರು 7ನೇ ಆರೋಪಿಯಾಗಿದ್ದು, ಅವರ ಪುತ್ರ ಅಶ್ವಿನ್ ಅವರು ಪ್ರಮುಖ ಆರೋಪಿಯಾಗಿದ್ದಾರೆ. 
ಮೊದಲ ಆರೋಪ ಪಟ್ಟಿಯಲ್ಲಿ ಅಶ್ವಿನ್ ರಾವ್, ನಾರಾಯಣಗೌಡ, 420 ಭಾಸ್ಕರ ಸೇರಿದಂತೆ ಇತರರನ್ನು ಪ್ರಮುಖ ಆರೋಪಿಗಳನ್ನಾಗಿಸಲಾಗಿದೆ. ಅಂತೆಯೇ ಈ ಆರೋಪಿಗಳೆಲ್ಲಾ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಭಾಸ್ಕರರಾವ್ ವಿರುದ್ಧ ಮೊಕದ್ದಮೆ ದಾಖಲಿಸಿ ವಿಚಾರಣೆಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಅನುಮತಿ ನೀಡಿದ ನಂತರ ಎಸ್‌ಐಟಿ ಲೋಕಾಯುಕ್ತ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಭಾಸ್ಕರ್ ರಾವ್ ಅವರನ್ನು 7ನೇ ಆರೋಪಿಯನ್ನಾಗಿ ಮಾಡಿದ್ದಾರೆ.
SCROLL FOR NEXT