ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಂಸದೆ ರಮ್ಯಾ 
ಪ್ರಧಾನ ಸುದ್ದಿ

ಪಾಕ್ ಪರ ಹೇಳಿಕೆ: ರಮ್ಯಾ ಹೇಳಿಕೆಯಲ್ಲಿ ತಪ್ಪಿಲ್ಲ- ಸಿದ್ದರಾಮಯ್ಯ ಸಮರ್ಥನೆ

ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿ ವಿರೋಧದ ಕೇಂದ್ರಬಿಂದುವಾಗಿರುವ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಬೆನ್ನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಂತಿದ್ದು, ರಮ್ಯಾ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ...

ಹುಬ್ಬಳ್ಳಿ: ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿ ವಿರೋಧದ ಕೇಂದ್ರಬಿಂದುವಾಗಿರುವ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಬೆನ್ನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಂತಿದ್ದು, ರಮ್ಯಾ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ಪಾಕ್ ಪರ ರಮ್ಯಾ ಅವರು ನೀಡಿದ್ದ ಹೇಳಿಕೆ ಕುರಿತಂತೆ ಇಂದು ಹುಬ್ಬಳ್ಳಿಯಲ್ಲಿ ಸಮರ್ಥನೆ ನೀಡಿರುವ ಅವರು, ರಮ್ಯಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಬಿಜೆಪಿಯವರಿಂದ ದೇಶಭಕ್ತಿ ಪಾಠ ಕಲಿಯಬೇಕಾದ ಅನಿವಾರ್ಯತೆ ನಮಗೆ ಇಲ್ಲ ಎಂದು ಹೇಳಿದ್ದಾರೆ.

ದೇಶ ಭಕ್ತಿ ಬಗ್ಗೆ ಮಾತನಾಡುವ ಬಿಜೆಪಿಯವರು ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಲಿ. ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಮಗಳ ಮದುವಗೆ ಪ್ರಧಾನಿ ಮೋದಿ ಹೋಗಿದ್ದು ಯಾಕೆ? ಹಿಂದೆ ಜಿನ್ನಾ ಬಗ್ಗೆ ಎಲ್.ಕೆ. ಅಡ್ವಾಣಿ ಅವರು ಏನನ್ನು ಹೇಳಿದ್ದರು? ಇಂತಹ ಬಿಜೆಪಿಯವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಸೃಷ್ಟಿಯಾಗಿರುವ ಅಮ್ನೆಸ್ಟಿ ವಿವಾದ ಕುರಿತಂತೆ ಮಾತನಾಡಿರುವ ಅವರು, ಅಮ್ನೆಸ್ಟಿ ಸಂಸ್ಥೆಯ ಕಾರ್ಯಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!