ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬುಲಂದ್ಶಹರ್ ರೇಪ್ ತನಿಖೆಯನ್ನು ಹಸ್ತಾಂತರಿಸುವ ಬಗ್ಗೆ ಉತ್ತರಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಬುಲಂದ್ಶಹರ್ ಗ್ಯಾಂಗ್ ರೇಪ್ ತನಿಖೆಯನ್ನು ರಾಜ್ಯ ಪೊಲೀಸರಿಂದ ಹಸ್ತಾಂತರಿಸುವ ಮನವಿ ಬಗ್ಗೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರದಿಂದ ಸೋಮವಾರ ಪ್ರತಿಕ್ರಿಯೆ ಕೇಳಿದೆ.

ನವದೆಹಲಿ: ಬುಲಂದ್ಶಹರ್ ಗ್ಯಾಂಗ್ ರೇಪ್ ತನಿಖೆಯನ್ನು ರಾಜ್ಯ ಪೊಲೀಸರಿಂದ ಹಸ್ತಾಂತರಿಸುವ ಮನವಿ ಬಗ್ಗೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರದಿಂದ ಸೋಮವಾರ ಪ್ರತಿಕ್ರಿಯೆ ಕೇಳಿದೆ. 
ರೇಪ್ ಗೆ ಒಳಗಾದ ಅಪ್ರಾಪ್ತ ಬಾಲಕಿ ತಂದೆ ಸಲ್ಲಿಸಿರುವ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ವಿ ನಾಗಪ್ಪನ್ ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಹಿರಿಯ ವಕೀಲ ಫಾಲಿ ನಾರಿಮನ್ ಅವರನ್ನು ಅಮಿಕಸ್ ಕ್ಯುರೆ ಆಗಿ ನೇಮಿಸಿದೆ. 
ತನಿಖೆಯನ್ನು ಉತ್ತರಪ್ರದೇಶ ಪೊಲೀಸರಿಂದ್ ಹಸ್ತಾಂತರಿಸುವುದಲ್ಲದೆ ಅದನ್ನು ಕೋರ್ಟ್ ಪರಿವೀಕ್ಷಣೆ ಕೂಡ ಮಾಡಬೇಕೆಂದು ಮನವಿಯಲ್ಲಿ ಕೇಳಿಕೊಳ್ಳಲಾಗಿದೆ. 
ಈ ಗ್ಯಾಂಗ್ ರೇಪ್ ಆರೋಪ ರಾಜಕೀಯ ಪಿತೂರಿ ಎಂದಿದ್ದ ಉತ್ತರ ಪ್ರದೇಶ ನಗರಾಭಿವೃದ್ಧಿ ಸಚಿವ ಅಜಂ ಖಾನ್ ವಿರುದ್ಧ ಎಫ್ ಐ ಆರ್ ದಾಖಲಿಸಬೇಕು ಎಂದು ಕೂಡ ಕೋರಿದ್ದ ಮನವಿಯನ್ನು ವಿಚಾರಿಸಿ ಸಚಿವರಿಗೆ ಕೂಡ ನೋಟಿಸ್ ನೀಡಲಾಗಿದೆ. 
ಜುಲೈ 29 ರಂದು ಷಹಜಹಾನ್ಪುರಕ್ಕೆ ತೆರಳುವ ಸಮಯದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಅವರ ತಾಯಿಯನ್ನು, ಅರ್ಜಿದಾರನ ಸಮ್ಮುಖದಲ್ಲಿಯೇ ರೇಪ್ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ