ಬೆಂಗಳೂರು: ರಾಜ್ಯ ಸರ್ಕಾರ ಸೆಪ್ಟೆಂಬರ್ 14ರಂದು ಒಂದು ದಿನದ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಸೂದೆ ಅಂಗೀಕಾರಕ್ಕಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ.
ಸೆ.14ರಂದು ಬೆಳಗ್ಗೆ 11ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿಶೇಷ ಅಧಿವೇಶನ ನಡೆಯಲಿದೆ.