ಶರಣಪ್ರಕಾಶ್ ಪಾಟೀಲ್ 
ಪ್ರಧಾನ ಸುದ್ದಿ

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ಗೆ ಹೈಕೋರ್ಟ್ ಸಮನ್ಸ್

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಕರ್ನಾಟಕ ಹೈಕೋರ್ಟ್‌...

ಕಲಬುರ್ಗಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಕರ್ನಾಟಕ ಹೈಕೋರ್ಟ್‌ ಕಲಬುರ್ಗಿ ಪೀಠ ಬುಧವಾರ ಹ್ಯಾಂಡ್ ಸಮನ್ಸ್ ಜಾರಿ ಮಾಡಿದೆ. 
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶರಣಪ್ರಕಾಶ್ ಪಾಟೀಲ್ ಅವರಿಗೆ ಮೂರು ಬಾರಿ ನೋಟಿಸ್‌ ನೀಡಿತ್ತು. ಆದರೆ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇಂದು 5 ದಿನಗಳಲ್ಲಿ ಖುದ್ದು ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಸಚಿವರು ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದರು. ಅಲ್ಲದೆ ಈ ಪ್ರದೇಶವನ್ನು ಅಭಿವೃದ್ಧಿ ಮಾಡುವುದಾಗಿ ಹೇಳಿಕೆ ನೀಡಿದ್ದರು.
ಈ ಸಂಬಂಧ ಚಿತ್ತಾಪುರದ ನಿವಾಸಿ ಅಬ್ದುಲ್ ರಬ್ ಅವರು ಸಚಿವರ ವಿರುದ್ಧ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT