ಜಯಲಲಿತಾ 
ಪ್ರಧಾನ ಸುದ್ದಿ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನ ಸುದ್ದಿ ತಳ್ಳಿಹಾಕಿದ ಅಪೋಲೊ ಆಸ್ಪತ್ರೆ

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ....

ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ 'ಅಮ್ಮ' ಜಯರಾಮ್ ಜಯಲಲಿತಾ ಅವರು ನಿಧನರಾಗಿದ್ದಾರೆ ಎಂಬ lತಮಿಳು ಟೀವಿ ಮಾಧ್ಯಮಗಳ ವರದಿಯನ್ನು ಆಸ್ಪತ್ರೆ ಸ್ಪಷ್ಟವಾಗಿ ತಳ್ಳಿಹಾಕಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಪೋಲೊ ಆಸ್ಪತ್ರೆ, ಜಯಲಲಿತಾ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಕೃತಕ ಉಸಿರಾಟ ಅಳವಡಿಸಲಾಗಿದೆ. ಅವರನ್ನು ಬದುಕಿಸಿಕೊಳ್ಳುವ ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದೆ.
ತಮಿಳು ಹಾಗೂ ಕನ್ನಡದ ಕೆಲವು ಸುದ್ದಿ ವಾಹಿನಿಗಳು ಜಯಲಲಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ನಿಧನ ವಾರ್ತೆಯನ್ನು ಆಸ್ಪತ್ರೆ ಇದುವರೆಗೂ ಅಧಿಕೃತಗೊಳಿಸಿಲ್ಲ.
ತೀವ್ರ ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿರುವ 68 ವರ್ಷದ ಜಯಲಲಿತಾ ಅವರು ಕಳೆದ ಸೆಪ್ಟೆಂಬರ್ 22ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಚ್ಚೀಚಿಗಷ್ಟೇ ತಮಿಳುನಾಡು ಮುಖ್ಯಮಂತ್ರಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಅಪೋಲೊ ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಅವರು ಹೇಳಿದ್ದರು. ಆದರೆ ನಿನ್ನೆ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಇಂದು ಬೆಳಗ್ಗೆಯಿಂದ ಇಸಿಎಂಒ ಉಪಕರಣದ ನೆರವಿನ ಮೂಲಕ ಆಮ್ಲಜನಕವನ್ನು ಪೂರೈಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT