ಕೊಯಮತ್ತೂರು: ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಅಮ್ಮ ಜಯಲಲಿತಾ ಅವರ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂಬ ಸುದ್ದಿ ಕೇಳಿ ಆಘಾತಗೊಂಡ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಸಿಂಗನಲ್ಲೂರಿನಲ್ಲಿ 65 ವರ್ಷದ ವ್ಯಕ್ತಿಯೊಬ್ಬ ನಿನ್ನೆ ರಾತ್ರಿ ಟಿವಿಯಲ್ಲಿ ಜಯಲಲಿತಾ ಅವರ ಸುದ್ದಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮತ್ತೊಂದು ಘಟನೆಯಲ್ಲಿ, ತುಡಿಯಲ್ಲೂರುನಲ್ಲಿ ನಿನ್ನೆ ಮಧ್ಯಾಹ್ನ ಟಿವಿ ನೋಡುತ್ತಿದ್ದ 62 ವರ್ಷದ ಪಳನಿಮಾಲ್ ಹಾಗೂ ಎರೊಡ್ ನ 38 ವರ್ಷದ ರಾಜಾ ಎಂಬುವವರು ಜಯಲಲಿತಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಸುದ್ದಿ ನೋಡಿ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಜಯಲಲಿತಾ ಅವರ ಸಾವಿನ ಸುದ್ದಿ ಕೇಳಿ ಕುಣಿಮತ್ತೂರ್ ನಲ್ಲಿ ಲೋಗನಾಥನ್ ಎಂಬ ವ್ಯಕ್ತಿ ಮೊಬೈಲ್ ಟವರ್ ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೆ ಕಳೆದ ರಾತ್ರಿ ಅಣ್ಣೂರಿನಲ್ಲಿ ಎಐಎಡಿಎಂಕೆ ಕಾರ್ಯಕರ್ತ ರಾಮಚಂದ್ರನ್ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics