ಪನ್ನೀರ್ ಸೆಲ್ವಂ ಮತ್ತು ಶಸಿಕಲಾ ನಟರಾಜನ್ 
ಪ್ರಧಾನ ಸುದ್ದಿ

ಪನ್ನೀರ್ ಸೆಲ್ವಂ ಶಶಿಕಲಾ ಆಜ್ಞೆ ಪಾಲಿಸುವುದಿಲ್ಲ; ಎಐಎಡಿಎಂಕೆ ಇಬ್ಭಾಗವಾಗಲಿದೆ: ಸ್ವಾಮಿ

ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸ್ವತಂತ್ರ್ಯವಾಗಿ ಕಾರ್ಯ ನಿರ್ವಹಿಸಲು ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅನುವು ...

ದೆಹಲಿ: ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅನುವು ಮಾಡಿಕೊಡುವುದಿಲ್ಲ, ಹೀಗಾಗಿ ಶೀಘ್ರವೇ ಎಐಎಡಿಎಂಕೆ ಒಡೆದು ಇಬ್ಬಾಗವಾಗುತ್ತದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸಂಸತ್ ಅಧಿವೇಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮಿ, ಒಬ್ಬ ವ್ಯಕ್ತಿಯಿಂದ ಎಐಎಡಿಎಂಕೆ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಪಕ್ಷದ ಎಲ್ಲಾ ಜವಾಬ್ದಾರಿಗಳನ್ನು ಶಶಿಕಲಾ ತೆಗೆದುಕೊಳ್ಳುತ್ತಾರೆ. ಪನ್ನೀರ್ ಸೆಲ್ವಂ ಅವರಿಗೆ ಮುಕ್ತವಾಗಿ ಆಡಳಿತ ನಡೆಸಲು ಬಿಡುವುದಿಲ್ಲ. ಹೀಗಾಗಿ ಶಶಿಕಲಾ ತಮ್ಮ ಕುಟುಂಬದವರೊಬ್ಬರನ್ನು ಈ ಹುದ್ದೆಗೆ ತಂದು ಕೂರಿಸುತ್ತಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಜಯಲಲಿತಾ ಅವರು ನಿಧನರಾದರೆಂದು ಘೋಷಿಸಿದ ಎರಡೇ ಘಂಟೆಗಳಲ್ಲಿ ಅವರ ನಿಷ್ಠ ಓ.ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಮೊದಲು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾಗೆ ಜೈಲು ಶಿಕ್ಷೆ ಆದಾಗ ಅಂದಿನ ತಮಿಳುನಾಡು ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ ಜಯಲಲಿತಾ ಸಾವಿನ ನಂತರ ಪನ್ನೀರ್ ಸೆಲ್ವಂ ಮತ್ತೆ 2ನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್