ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಬೆಂಗಳೂರಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ಸೇರಿ ಮೂವರ ಬಂಧನ

ಆರ್ ಬಿಐ ನಿಯಮ ಉಲ್ಲಂಘಿಸಿ ಕಪ್ಪು ಹಣವನ್ನು ಬಳಿ ಮಾಡಲು ಸಹಕರಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ಸೆಂಟ್ರಲ್ ಬ್ಯಾಂಕ್...

ಬೆಂಗಳೂರು: ಆರ್ ಬಿಐ ನಿಯಮ ಉಲ್ಲಂಘಿಸಿ ಕಪ್ಪು ಹಣವನ್ನು ಬಳಿ ಮಾಡಲು ಸಹಕರಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ಸೇರಿದಂತೆ ಮೂವರನ್ನು ಸಿಬಿಐ ಬುಧವಾರ ಬಂಧಿಸಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಬಸವನಗುಡಿ ಶಾಖೆಯ ಹಿರಿಯ ವ್ಯವಸ್ಥಾಪಕ ಎಸ್ ಲಕ್ಷ್ಮೀನಾರಾಯಣ ಹಾಗೂ ಓಂಕಾರ್ ಪರಿಮಳ ಮಂದಿರ್ ನಿರ್ದೇಶಕ ಎಸ್ ಗೋಪಾಲ್ ಮತ್ತು ಅಶ್ವಿನ್ ಜಿ ಸುಂಕುರ್ ಅವರ ವಿರುದ್ಧ ನಿನ್ನೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಅಲ್ಲದೆ ಈ ಮೂವರ ಮನೆಗಳ ಮೇಲೆ ದಾಳಿ ನಡೆಸಿತ್ತು.
ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಸಿಬಿಐ ಇಂದು ವಿಚಾರಣೆಗೆ ಕರೆದಿತ್ತು. ವಿಚಾರಣೆ ವೇಳೆ ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಲು ವಿಫಲವಾದ ಹಿನ್ನೆಲೆಯನ್ನು ಸಿಬಿಐ ಆರೋಪಿಗಳನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರು ಪಡಿಸಿದೆ. ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ಆರೋಪಿಗಳನ್ನು ಐದು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.
ದಾಳಿಯ ವೇಳೆ ಆರೋಪಿಗಳ ಬಳಿ ಇದ್ದ ಬ್ಯಾಂಕ್ ವೋಚರ್ ಗಳು, ಡಿಡಿಗಳು, ಆಸ್ತಿ ದಾಖಲೆಗಳು, ಹಾರ್ಡ್ ಡಿಸ್ಕ್ ಹಾಗೂ 500, 1000 ರುಪಾಯಿ ಮುಖಬೆಲೆಯ 5,91,500 ರುಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ಸೆಂಟ್ರಲ್ ಬ್ಯಾಂಕ್ ಆಪ್ ಇಂಡಿಯಾ ಹಿರಿಯ ವ್ಯವಸ್ಥಾಪಕ ಲಕ್ಷ್ಮೀನಾರಾಯಣ ಅವರು ಆರ್ ಬಿಐ ನಿಯಮ ಉಲ್ಲಂಘಿಸಿ ಪೂಣೆ ಮೂಲದ ಹಣಕಾಸು ಸಂಸ್ಥೆಗೆ 147 ಡಿಡಿಗಳನ್ನು ನೀಡಿದ್ದಾರೆ ಎಂದು ಸಿಬಿಐ ಕೋರ್ಟ್ ಗೆ ಸಲ್ಲಿಸಿದ ಎಫ್ಐಆರ್ ನಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!