ಶಶಿಕಲಾ 
ಪ್ರಧಾನ ಸುದ್ದಿ

ಜಯಾ ಆಪ್ತೆ ಶಶಿಕಲಾರನ್ನು ಸಮರ್ಥಿಸಿಕೊಂಡ ಎಐಎಡಿಎಂಕೆ, ಶೀಘ್ರ ಪ್ರಧಾನ ಕಾರ್ಯದರ್ಶಿ ಆಯ್ಕೆ

ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರ ಸಾವಿನ ನಂತರ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು,...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರ ಸಾವಿನ ನಂತರ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ ಎಂಬ ವರದಿಯನ್ನು ಎಐಎಡಿಎಂಕೆ ಸ್ಪಷ್ಟವಾಗಿ ತಳ್ಳಿಹಾಕಿದೆ.
ಈ ಮಧ್ಯೆ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಎಐಎಡಿಎಂಕೆ ಜಯಲಲಿತಾ ಅವರು ಹೊಂದಿದ್ದ ಪಕ್ಷದ ಉನ್ನತ ಹುದ್ದೆಯಾದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶೀಘ್ರ ಚುನಾವಣೆ ನಡೆಸುವುದಾಗಿ ಶನಿವಾರ ತಿಳಿಸಿದೆ.
ಶಶಿಕಲಾ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪಕ್ಷ ಸಂಘಟನಾ ಕಾರ್ಯದರ್ಶಿ ಸಿ.ಪೊನ್ನಯನ್ ಅವರು, ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸೇರಿದಂತೆ ಪಕ್ಷದ ಹಲವು ನಾಯಕರು ಶಶಿಕಲಾ ಅವರು ಒಬ್ಬ ಪ್ರಮುಖ ಸದಸ್ಯೆ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.
ಪಕ್ಷದ ಹೈಕಮಾಂಡ್ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಕೆಲ ಸಚಿವರು ಶಶಿಕಲಾ ಅವರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪೊನ್ನಯನ್ ಅವರು, ನಮ್ಮ ಪಕ್ಷಕ್ಕೆ ಸೇರಿದವರು ಶಶಿಕಲಾ ಅಮ್ಮನನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಅವರು ನಮ್ಮ ಪಕ್ಷದ ಪ್ರಮುಖ ಸದಸ್ಯರಲ್ಲವೇ? ಎಂದು ಮರು ಪ್ರಶ್ನಿಸಿದ್ದಾರೆ.
ಇನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗಾಗಿ ಪ್ರಚಾರ ಮಾಡಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಬರೀ ವದಂತಿ ಅಂತ ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ