ಭೀಮಾನಾಯಕ್ 
ಪ್ರಧಾನ ಸುದ್ದಿ

ರಮೇಶ್ ಆತ್ಮಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಭೀಮಾನಾಯಕ್ ಅಮಾನತು

ತಮ್ಮ ಕಾರು ಚಾಲಕ ರಮೇಶ್ ಗೌಡ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ...

ಬೆಂಗಳೂರು: ತಮ್ಮ ಕಾರು ಚಾಲಕ ರಮೇಶ್ ಗೌಡ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ ಭೀಮಾ ನಾಯಕ್ ಅವರನ್ನು ಸೋಮವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಂದಾಯ ಇಲಾಖೆ ಸದ್ಯ ಸಿಐಡಿ ವಶದಲ್ಲಿರುವ ಭೀಮಾನಾಯಕ್ ಅವರ ವಿರುದ್ಧ ಇಲಾಖೆ ವಿಚಾರಣೆ ಬಾಕಿಯಿಟ್ಟು ಸೇವೆಯಿಂದ ಅಮಾನತುದೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ ಬೆಳಗ್ಗೆ ಕಲಬುರ್ಗಿಯಲ್ಲಿ ಸಿಐಡಿ ಪೊಲೀಸರು ಭೀಮಾನಾಯಕ್ ಹಾಗೂ ಅವರ ಖಾಸಗಿ ಚಾಲಕ ಅಹಮ್ಮದ್ ಅವರನ್ನು ಬಂಧಿಸಿದ್ದರು. ಬಳಿಕ ಮಂಡ್ಯ ಜಿಲ್ಲೆ ಮದ್ದೂರಿಗೆ ಕರೆದೊಯ್ದು ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು ಡಿಸೆಂಬರ್ 17ರವರೆಗೆ ಸಿಐಡಿ ವಶಕ್ಕೆ ನೀಡಿದೆ.
ಡಿಸೆಂಬರ್ 6ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ರಮೇಶ್ ಅವರು, ನನ್ನ ಸಾವಿಗೆ ಭೀಮಾನಾಯಕ್ ಹಾಗೂ ಅವರ ಖಾಸಗಿ ಕಾರು ಚಾಲಕ ಮಹಮದ್‌ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದರು. ಈ ಸಂಬಂಧ ಮದ್ದೂರು ಠಾಣೆಯಲ್ಲಿ ದೂರು ದಾಖಲಾದ ನಂತರ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.
ರಮೇಶ್ ಅವರು ತಮ್ಮ 17 ಪುಟಗಳ ಡೆತ್ ನೋಟ್ ನಲ್ಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಹೆಸರು ಪ್ರಸ್ತಾಪ ಮಾಡಿದ್ದು, ರೆಡ್ಡಿಯ ಸುಮಾರು 100 ಕೋಟಿ ರುಪಾಯಿಯಷ್ಟು ಕಪ್ಪು ಹಣವನ್ನು ಭೀಮಾನಾಯ್ಕ್ ಅವರು ಶೇ.20ರಷ್ಟು ಕಮಿಷನ್ ಪಡೆದು ವೈಟ್ ಆಗಿ ಮಾಡಿಕೊಟ್ಟಿರುವುದಾಗಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT