ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ನೋಟು ನಿಷೇಧ ಮೋದಿ ಮಾಡಿದ ದುರಂತ: ರಾಹುಲ್ ಗಾಂಧಿ

ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...

ಬೆಳಗಾವಿ: ನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ನೋಟು ರದ್ದತಿ ಮೋದಿ ಮಾಡಿದ ದೊಡ್ಡ ದುರಂತ(ಮೋದಿ ಮೇಡ್ ಡಿಸಾಸ್ಟರ್) ಎಂದು ಶನಿವಾರ ಆರೋಪಿಸಿದ್ದಾರೆ.
ಇಂದು ಬೆಳಗಾವಿಯಲ್ಲಿ ಬೃಹತ್ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅಲ್ಲದೆ ನೋಟ್ ನಿಷೇಧದ ನಂತರ ದೇಶಾದ್ಯಂತ ಹಲವು ಮಂದಿ ಮೃತಪಟ್ಟಿದ್ದು, ಈ ಸಾವಿಗೆ ನೇರವಾಗಿ ಪ್ರಧಾನಿಯೇ ಹೊಣೆ ಎಂದರು.
ಸಂಸತ್ತಿನಲ್ಲಿ ಮೋದಿಯವರು ರೈತರನ್ನು, ಕಾರ್ಮಿಕರನ್ನು ತಮಾಷೆ ಮಾಡಿದರು. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಗೇಲಿ ಮಾಡಿದರು. ಬಡವರು, ರೈತರಿಗೆ ಮೂಲಭೂತ ಅಗತ್ಯಗಳನ್ನು ಒದಗಿಸಲು ಮೋದಿಯವರಿಗೆ ಆಗುತ್ತಿಲ್ಲ. ಬಡವರ, ರೈತರ ಸಾಲಮನ್ನಾ ಮಾಡುತ್ತಿಲ್ಲ ಎಂದು ಅವರು ಟೀಕಿಸಿದರು.
ಮೋದಿ ಬಡವರ ಹೆಸರಿನಲ್ಲಿ ಶ್ರೀಮಂತರಿಗೆ ಹಾಗೂ ಉದ್ಯಮಿಗಳಿಗೆ ಕಾರ್ಯಕ್ರಮ ರೂಪಿಸಿದ್ದಾರೆ. ಶ್ರೀಮಂತರ ಸಾಲ ಬೇಕಿದ್ದರೆ ಮನ್ನಾ ಆಗಬಹುದು. ಆದರೆ ರೈತರ ಸಾಲ ಮನ್ನಾ ಮಾಡಲ್ಲ. ಮದ್ಯದ ದೊರೆ ವಿಜಯ್ ಮಲ್ಯ ಅವರು ಒಬ್ಬ ಚೋರ. ತಾವು ಅವರ 1200 ಕೋಟಿ ರುಪಾಯಿ ಸಾಲವನ್ನು ಮನ್ನಾ ಮಾಡಿದ್ದು ಏಕೆ? ಎಂದು ಕಾಂಗ್ರೆಸ್ ನಾಯಕ ಪ್ರಧಾನಿಯನ್ನು ಪ್ರಶ್ನಿಸಿದರು. 
ನೋಟು ನಿಷೇಧದ ಪರಿಣಾಮವಾಗಿ ದೇಶದಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೋಟು ನಿಷೇಧದಿಂದ ಭಾರತ ವಿಭಜನೆಯಾಗಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ