ಸುಬ್ರಮಣಿಯನ್ ಸ್ವಾಮಿ 
ಪ್ರಧಾನ ಸುದ್ದಿ

ಡಿಮಾನಿಟೈಸೇಶನ್ ಬಗ್ಗೆ ಅರುಣ್ ಜೈಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ: ಸುಬ್ರಮಣಿಯನ್ ಸ್ವಾಮಿ

ನೋಟು ನಿಷೇಧದ ನಂತರ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ...

ಕೊಯಂಬತ್ತೂರ್: ನೋಟು ನಿಷೇಧದ ನಂತರ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್  ಸ್ವಾಮಿ ಆರೋಪಿಸಿದ್ದಾರೆ.

ಕೊಯಂಬತ್ತೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ನೋಟು ನಿಷೇಧ ಘೋಷಿಸುವ ಮುನ್ನ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ನಂತರ ವಷ್ಟೇ ಹಣಕಾಸು ಇಲಾಖೆ ಅನಾಣ್ಯೀಕರಣ ಘೋಷಿಸಬೇಕಿತ್ತು. ಆದರೇ ಹಣಕಾಸು ಇಲಾಖೆ ಅಗತ್ಯವಾದ ಪೂರ್ವ ತಯಾರಿ ಮಾಡಿಕೊಳ್ಳದ ಕಾರಣ ಜಮ ಸಾಮಾನ್ಯರು ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಎಟಿಎಂ ಗಳನ್ನು ಸ್ಥಾಪಿಸಿ, ನಿಷೇಧಿಸಿದ ನೋಟುಗಳ ಅಳತೆಯಲ್ಲೇ ಹೊಸ ನೋಟುಗಳನ್ನು ಮುದ್ರಿಸಿ, ಇದರಿಂದ ಎಟಿಎಂ ಬಳಕೆಗೆ ಉಪಯೋಗವಾಗುತ್ತದೆ ಎಂದು ನಾವು ಶಿಪಾರಸು ಮಾಡಿದ್ದೆವು. ಜೊತೆಗೆ ಆದಾಯ ತೆರಿಗೆಯನ್ನು ಇಳಿಕೆ ಮಾಡುವಂತೆ ನಾವು ಸಲಹೆ ನೀಡಿದ್ದೆವು, ಆದರೆ ಸರ್ಕಾರ ನಾವು ನೀಡಿದ್ದ ಯಾವುದೇ ಸಲಹೆಯನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ಸ್ವಾಮಿ ಆಪಾದಿಸಿದ್ದಾರೆ.

ತಲೆದೋರಿರುವ ನಗದು ಬಿಕ್ಕಟ್ಟು ಹಾಗೂ ಹೊಸ ನೋಟುಗಳ ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅರುಣ್ ಜೇಟ್ಲಿ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೋಟು ನಿಷೇಧವನ್ನು ಅಧಿಕೃತವಾಗಿ ಘೋಷಿಸುವ ಮುನ್ನ ಕೆಲವರಿಗೆ ವಿಷಯ ಸೋರಿಕೆಯಾಗಿತ್ತು. ಈ ಸಂಬಂಧ ನಾವು ಯಾವುದೇ ಕೇಸು ದಾಖಲಿಸುತ್ತಿಲ್ಲ, ಆದರೆ ಸರ್ಕಾರ ಇದರ ವಿರುದ್ಧ ಕೇಸು ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!