ಪ್ರಧಾನ ಸುದ್ದಿ

ಹೂಡಿಕೆಗೆ ಕರ್ನಾಟಕ ಉತ್ತಮ ರಾಜ್ಯ, ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಶಾಖೆ: ನಾರಾಯಣಮೂರ್ತಿ

Lingaraj Badiger
ಬೆಂಗಳೂರು: ಬಂಡವಾಳ ಹೂಡಿಕೆಗೆ ದೇಶದಲ್ಲೇ ಕರ್ನಾಟಕ ಉತ್ತರ ರಾಜ್ಯ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು ಬುಧವಾರ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ 'ಇನ್ವೆಸ್ಟ್ ಕರ್ನಾಟಕ 2016'ರಲ್ಲಿ ಮಾತನಾಡಿದ ನಾರಾಯಣಮೂರ್ತಿ ಅವರು, ಈಗಾಗಲೇ ರಾಜ್ಯದ ಮೂರು ನಗರಳಾದ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಇನ್ಫೋಸಿಸ್ ಸಂಸ್ಥೆ ಸ್ಥಾಪಿಸಲಾಗಿದ್ದು, ಶೀಘ್ರದಲ್ಲೇ ಹುಬ್ಬಳ್ಳಿಯಲ್ಲೂ ಇನ್ಫೋಸಿಸ್ ಶಾಖೆ ಆರಂಭಿಸಲಾಗುವುದು ಎಂದು ತಿಳಿಸಿದರು.
ನಮ್ಮಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿ ವಾಸಿಸಲು ಬಯಸುತ್ತಾರೆ. ಹೀಗಾಗಿ ಬೆಂಗಳೂರನ್ನು ಮತ್ತಷ್ಟು ವಾಸ ಸ್ನೇಹಿಯಾಗಿ ಮಾಡಬೇಕು ಎಂದು ನಾರಾಯಣಮೂರ್ತಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಬೆಳಗ್ಗೆ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತ್ ಕುಮಾರ್, ಕೈಗಾರಿಕಾ ಸಚಿವ ಆರ್. ವಿ.ದೇಶಪಾಂಡೆ ಹಾಗೂ ಉದ್ಯಮಿ ರತನ್ ಟಾಟಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
SCROLL FOR NEXT