ಪರಮೇಶ್ವರ 
ಪ್ರಧಾನ ಸುದ್ದಿ

ತಾಂಜೇನಿಯಾ ವಿದ್ಯಾರ್ಥಿನಿಗೆ ಥಳಿತ: ಐವರ ಬಂಧನ, ತನಿಖೆಗೆ ಆದೇಶ; ಪರಮೇಶ್ವರ

ತಾಂಜೇನಿಯಾದ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿ, ಆಕೆಯ ಬಟ್ಟೆ ಹರಿದು, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು...

ಬೆಂಗಳೂರು: ತಾಂಜೇನಿಯಾದ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿ, ಆಕೆಯ ಬಟ್ಟೆ ಹರಿದು, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.
ಘಟನೆ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪರಮೇಶ್ವರ, ನಾವು ವಿದೇಶಿ ವಿದ್ಯಾರ್ಥಿಗಳ ರಕ್ಷಣೆಗೆ ಬದ್ಧವಾಗಿದೆ. ತಾಂಜೇನಿಯಾ ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎಂದರು. ಅಲ್ಲದೆ ಸಿಸಿಬಿ ಪೊಲೀಸರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದೆ ಮತ್ತು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೂ ಚರ್ಚಿಸಿದ್ದಾರೆ ಎಂದು ಪರಮೇಶ್ವರ ತಿಳಿಸಿದರು.
ವಿದೇಶಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ, ಬಂಗಾರಿ ಬಿನ್ ತಿಮ್ಮೇಗೌಡ, ಲೋಕೇಶಿ, ಭಾನುಪ್ರಕಾಶ್, ರೆಹಮತ್ ಉಲ್ಲಾ ಹಾಗೂ ರಾಮಯ್ಯ ಎಂಬುವವರನ್ನು ಬಂಧಿಸಲಾಗಿದೆ ಎಂದರು.
ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯರ ಮೇಲೆ ನಡೆದ ಹಲ್ಲೆಯು ವರ್ಣೀಯ ಹಲ್ಲೆಯಲ್ಲ, ರಸ್ತೆ ಅಪಘಾತವೊಂದರ ಬಳಿಕ ನಡೆದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ. ಮಹಿಳೆಯ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡಲಾಗಿದೆ ಎಂಬುದು ಸುಳ್ಳು ಎಂದು ಪರಮೇಶ್ವರ ಸ್ಪಷ್ಟಪಡಿಸಿದರು.
ಕಳೆದ ಜನವರಿ 31ರಂದು ಮದ್ಯ ಸೇವಿಸಿದ್ದ ಸೂಡಾನ್‌ ವಿದ್ಯಾರ್ಥಿ ಮೊಹಮದ್‌ ಅಹದ್‌ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಗಣಪತಿ ನಗರದ ಶಬಾನಾ ತಾಜ್‌ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಲ್ಲದೆ ಅವರ ಪತಿ ಸನಾವುಲ್ಲಾ ಗಾಯಗೊಂಡಿದ್ದರು.
ಈ ಅಪಘಾತದಿಂದ ಕೆರಳಿದ ಸ್ಥಳೀಯರು, ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿಸಿ ಆತನ ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗಲಾಟೆ ವಿಚಾರ ತಿಳಿದು ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದರು. ಆದರೆ ಅಪಘಾತ ನಡೆಯದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT