ಸಾ.ಶಿ ಮರುಳಯ್ಯ 
ಪ್ರಧಾನ ಸುದ್ದಿ

ಕನ್ನಡದ ಹಿರಿಯ ಸಾಹಿತಿ ಸಾ.ಶಿ. ಮರುಳಯ್ಯ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಪ್ರಮುಖ ಸಾಹಿತಿ ಸಾ.ಶಿ ಮರುಳಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ....

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಪ್ರಮುಖ ಸಾಹಿತಿ ಸಾ.ಶಿ ಮರುಳಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ಹೃದಯ ಸಂಬಂಧಿ ಉಸಿರಾಟ ಸಂಬಂಧಿ ಕಾಯಿಲೆ ಬಳಲುತ್ತಿದ್ದ 85 ವರ್ಷದ ಮರುಳಯ್ಯ ಅವರು ಕಳೆದ 15 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 7.45ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.

ಮರುಳಯ್ಯ ಅವರು ಇಬ್ಬರು ಗಂಡುಮಕ್ಕಳು, ಓರ್ವ ಮಗಳನ್ನು ಅಗಲಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

1931ರಲ್ಲಿ ಸಾ.ಶಿ. ಮರುಳಯ್ಯನವರು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಸಾಸಲು ಗ್ರಾಮದಲ್ಲಿ ಜನಿಸಿದ್ದರು. ತಂದೆ ಶಿವರುದ್ರಯ್ಯ, ತಾಯಿ ಸಿದ್ದಮ್ಮ. ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು  ಸಾಸಲು ಗ್ರಾಮದಲ್ಲಿ.

ಚಾಮರಾಜನಗರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚನ್ನಪಟ್ಟಣ, ಮಂಗಳೂರು, ಬೆಂಗಳೂರುಗಳ ಕಾಲೇಜುಗಳಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ ಸುಮಾರು ಮೂವತ್ತು ವರ್ಷಗಳ ಬೋಧನಾನುಭವವನ್ನು ಹೊಂದಿದ್ದರು. 1995 ರಿಂದ 1998ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಮರುಳಯ್ಯರ ಪ್ರಮುಖ ಕೃತಿಗಳು:
ಶಿವತಾಂಡವ, ಕೆಂಗನಕಲ್ಲು, ರಾಸಲೀಲೆ, ರೂಪಸಿ (ಕಾವ್ಯ), ಪುರುಷಸಿಂಹ, ಹೇಮಕೂಟ, ಸಾಮರಸ್ಯದ ಶಿಲ್ಪ (ಕಾದಂಬರಿ), ವಿಜಯವಾತಾಪಿ, ಎರಡು ನಾಟಕಗಳು, ಮರೀಬೇಡಿ ಮುಂತಾದ ನಾಟಕಗಳು, ನೆಲದ ಸೊಗಡು-ಕಥಾಸಂಕಲನ. ವಚನ ವೈಭವ, ಸ್ಪಂದನ, ಅವಲೋಕನ ಮುಂತಾದ ಸಂಶೋಧನಾ ಕೃತಿಗಳು. ಮಾಸ್ತಿಯವರ ಕಾವ್ಯ ಸಮೀಕ್ಷೆ, ಅಭಿವ್ಯಕ್ತ, ಅನುಶೀಲನ ಮೊದಲಾದ ವಿಮರ್ಶಾ ಕೃತಿಗಳು.

ಪ್ರಶಸ್ತಿಗಳು
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ದೇವರಾಜ ಬಹದ್ದೂರ್ ಪ್ರಶಸ್ತಿ, ಎಚ್.ನರಸಿಂಹಯ್ಯ ಪ್ರಶಸ್ತಿ ಮುಖ್ಯವಾದವುಗಳು. ‘ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ. ಹಿತೈಷಿಗಳು ಅರ್ಪಿಸಿದ ಅಭಿನಂದನ ಗ್ರಂಥ ‘ಇಷಾಂಶು ಮತ್ತು ಅಭಿಜ್ಞ’

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

ಎಸ್‌ಐಆರ್ ಕರ್ತವ್ಯಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ; ಒತ್ತಡ ಕಡಿಮೆ ಮಾಡಲು ಆದೇಶ

ಅಗತ್ಯ ವಸ್ತುಗಳ ಮೇಲೆ ಆರೋಗ್ಯ, ರಾಷ್ಟ್ರೀಯ ಭದ್ರತಾ ಸೆಸ್ ಇಲ್ಲ: ರಾಜ್ಯಗಳೊಂದಿಗೆ ಆದಾಯ ಹಂಚಿಕೆ- ನಿರ್ಮಲಾ ಸೀತಾರಾಮನ್

Video: 'ದೇಶದ ಅತ್ಯಂತ ಭ್ರಷ್ಟ 5 ರಾಜ್ಯಗಳಲ್ಲಿ ಕರ್ನಾಟಕ, ನಿಯಂತ್ರಿಸದಿದ್ದರೆ ಭವಿಷ್ಯಕ್ಕೇ ಅಪಾಯ': ಲೋಕಾಯುಕ್ತ

ಇಂಡಿಗೋದಲ್ಲಿ ಭಾರಿ ಅಸ್ತವ್ಯಸ್ತತೆ; ಗುರುವಾರ 300ಕ್ಕೂ ಹೆಚ್ಚು ದೇಶಿ, ಅಂತರರಾಷ್ಟ್ರೀಯ ವಿಮಾನಗಳು ರದ್ದು

SCROLL FOR NEXT