ಕುಸಿದುಬಿದ್ದ ಪಾರ್ಸಲ್ ಕಚೇರಿಯ ಕಟ್ಟಡ
ಹುಬ್ಬಳ್ಳಿ: ಹುಬ್ಬಳ್ಳಿಯ ಕೇಂದ್ರ ರೇಲ್ವೆ ನಿಲ್ದಾಣದ ಬಳಿ ಇರುವ ಪಾರ್ಸಲ್ ಕಚೇರಿಯ ಕಟ್ಟಡ ಸೋಮವಾರ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಆರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಆದರೆ ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸುಮಾರು 50 ವರ್ಷ ಹಳೆಯದಾದ ಎರಡು ಅಂತಸ್ತಿನ ಕಟ್ಟಡ ಇಂದು ದೀಢಿರ್ ಕುಸಿದು ಬಿದ್ದಿದೆ. ಸ್ಥಳಕ್ಕೆ ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ರೇಲ್ವೆ ಸಿಬ್ಬಂದಿ ಧಾವಿಸಿದ್ದು, ಕಟ್ಟದೊಳಗೆ ಸಿಲುಕಿರುವ ಸಿಬ್ಬಂದಿಯ ರಕ್ಷಣೆ ಮಾಡಿ ರೇಲ್ವೆ ಆಸ್ಪತ್ರೆಗೆ ದಾಖಲಿಸಿದ್ದರು.
ರಕ್ಷಣಾ ಸಿಬ್ಬಂದಿ ಬಸಯ್ಯ ಹಿರೇಮಠ ಹಾಗೂ ರೆಹಮಾನ್ ಎಂಬುವವರು ಸೇರಿದಂತೆ ಇದುವರೆಗೆ ಐವರು ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗರಾಣೆ ಅವರು ಭೇಟಿ ನೀಡಿದ್ದರು.
ಹಳೆಯ ಕಟ್ಟಡ ನೆಲಸಮಗೊಳಿಸುವಾಗ ಕಟ್ಟಡ ಕುಸಿತ
ಹಳೆಯ ಕಟ್ಟಡವನ್ನು ನೆಲಸಮಗೊಳಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ರೈಲ್ವೆ ರಕ್ಷಣಾ ತಂಡದ ಇನ್ಸ್ ಪಕ್ಟರ್ ಕುಬೇರಪ್ಪ ತಿಳಿಸಿದ್ದಾರೆ. ಕಟ್ಟಡದ 2ನೇ ಅಂತಸ್ತಿನಲ್ಲಿ ಪೊಲೀಸ್ ಠಾಣೆ ಇದ್ದಿದ್ದು, ಅದನ್ನು ಬೇರೆಡೆ ಸ್ಥಳಾಂತರಿಸಲಾಗಿತ್ತು. ಕಟ್ಟಡದ ಮೊದಲ ಅಂತಸ್ತಿನಲ್ಲಿ ಗೋಡೆ ಒಡೆಯುತ್ತಿದ್ದಾಗ ಮೇಲಂತಸ್ತು ಕುಸಿದು ಬಿದ್ದಿದೆ ಎಂದು ಕುಬೇರಪ್ಪ ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics