ಸಿದ್ದರಮಾಯ್ಯ 
ಪ್ರಧಾನ ಸುದ್ದಿ

ಸಿಎಂ ಸಿದ್ದರಾಮಯ್ಯ ಧರಿಸುವ ಡೈಮಂಡ್ ವಾಚ್ ಬೆಲೆ 50ರಿಂದ 70 ಲಕ್ಷ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರಿಸುವ ವಾಚ್ ವಿವಾದಕ್ಕೆ ಇದೀಗ ಹೊಸ ಟ್ವಿಸ್ಟ್ ದೊರೆತಿದೆ, ಕೆಲವು ದಿನಗಳ ಹಿಂದೆ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರಿಸುವ ವಾಚ್ ಹಾಗೂ ಕನ್ನಡಕ ವಿವಾದಕ್ಕೆ ಇದೀಗ ಹೊಸ ಟ್ವಿಸ್ಟ್ ದೊರೆತಿದೆ. ಕೆಲವು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಧರಿಸುವ ವಾಚ್ ನ ಬೆಲೆ 50 ಲಕ್ಷ ಹಾಗೂ ಕನ್ನಡಕ 1.5 ಲಕ್ಷ ರುಪಾಯಿ ಬೆಲೆ ಬಾಳುತ್ತದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ, ನನ್ನ ವಾಚ್ ಗೆ ಹತ್ತು ಲಕ್ಷ ರೂಪಾಯಿ ಕೊಡಿ, ಕನ್ನಡಕ ತಗೊಳ್ಳಿ 50 ಸಾವಿರ ಕೊಡಿ ಸಾಕು ಎಂದು ಪತ್ರಕರ್ತರನ್ನೇ ಪ್ರಶ್ನಿಸಿದ್ದರು. ಆದರೆ ಸಿಎಂ ಧರಿಸುವ ವಾಚ್ ನ ಬೆಲೆ ನಿಜಕ್ಕೂ 50ರಿಂದ 70 ಲಕ್ಷ ರುಪಾಯಿ ಬೆಲೆ ಬಾಳುವಂತಾದ್ದು ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರು ಡೈಮಂಡ್ ಲೇಪಿತ ಹ್ಯೂಬ್ಲೊಟ್ ಕಂಪನಿಯ ವಾಚ್ ಧರಿಸುತ್ತಿದ್ದು, ಅದರ ಬೆಲೆ ಅಂದಾಜು 50 ಲಕ್ಷದಿಂದ 70 ಲಕ್ಷ ರುಪಾಯಿ ಎಂದು ವಾಚ್ ಶೋರೂಂ ಮಾಲೀಕರೊಬ್ಬರು ಹೇಳಿರುವುದಾಗಿ ವರದಿ ಮಾಡಲಾಗಿದೆ. ಈ ಮೂಲಕ ಸಿದ್ದರಾಮಯ್ಯನವರು ಲಕ್ಷಾಂತರ ರುಪಾಯಿ ಮೌಲ್ಯದ ವಾಚ್ ಧರಿಸುತ್ತಿದ್ದಾರೆ ಎಂಬುದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ  ಕುಮಾರಸ್ವಾಮಿ ಅವರು, ಸಿದ್ದರಾಮಯ್ಯನವರು ಲೋಹಿಯಾವಾದಿಯೂ ಅಲ್ಲ, ಸಮಾಜವಾದಿಯೂ ಅಲ್ಲ. ಅವರೀಗ ಕಾಂಗ್ರೆಸ್ ವಾದಿಯಾಗಿದ್ದಾರೆ. ಬಡವರ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ನಾನು ಬಡವರ ಪರ ಎಂದು ಕಪಟ ನಾಟಕ ಆಡುತ್ತಿದ್ದಾರೆ. ಸಮಾಜವಾದಿ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯನವರು ದುಬಾರಿ ಜೀವನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸಿದ್ದರಾಮಯ್ಯನವರು ಗೃಹ ಪ್ರವೇಶ ಮಾಡಿಸಿದಾಗ, ಯಾವ ಮಾಧ್ಯಮದವರನ್ನು ಒಳಗೆ ಬಿಡಲಿಲ್ಲ. ಇದೇನಾ ಸಿದ್ದರಾಮಯ್ಯನವರ ಪಾರದರ್ಶಕ ಜೀವನ. ಅವರು ಬೇಕಾದರೆ 2 ಕೋಟಿ ರು. ಮೌಲ್ಯದ ವಾಚ್ ಕಟ್ಟಿಕೊಳ್ಳಲಿ. ಆದರೆ ಸಮಾಜವಾದಿ ಎಂದು ಜನರಿಗೆ ಸುಳ್ಳು ಹೇಳಬಾರದು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕುಮಾರಸ್ವಾಮಿ ಮಹಾನ್ ಸುಳ್ಳುಗಾರ. ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು. ಕುಮಾರಸ್ವಾಮಿ ಮಾತುಗಳನ್ನು ನಂಬಬೇಡಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT