ಹನುಮಂತಪ್ಪ ಕೊಪ್ಪದ್ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು. 
ಪ್ರಧಾನ ಸುದ್ದಿ

ಕೋಮಾದಲ್ಲಿ ಕನ್ನಡಿಗ ಯೋಧ ಕೊಪ್ಪದ್, ಸ್ಥಿತಿ ಇನ್ನೂ ಗಂಭೀರ: ಆಸ್ಪತ್ರೆ ವೈದ್ಯರು

ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ 6 ದಿನಗಳ ನಂತರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ 6 ದಿನಗಳ ನಂತರ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರು ನಿವಾಸಿ, ಕನ್ನಡಿಗ ಯೋಧ ಹನುಮಂತಪ್ಪ ಕೊಪ್ಪದ್ ಅವರು ಕೋಮಾಕ್ಕೆ ಜಾರಿದ್ದು, ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಬುಧವಾರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 
'ಯೋಧನ ಸ್ಥಿತಿ ಇನ್ನೂ ಗಂಭೀರವಾಗಿದೆ. ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಮುಂದಿನ 2, 3 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುವುದು' ಎಂದು ಆರ್ ಆರ್ ಆಸ್ಪತ್ರೆಯ ವೈದ್ಯರು ಐಎಎನ್ಎಸ್ ಗೆ ತಿಳಿಸಿದ್ದಾರೆ.
ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಆರೋಗ್ಯ ಸ್ಥಿತಿ ಕೋಮಾ ಸ್ಥಿತಿಯಲ್ಲೇ ಮುಂದುವರಿದಿದ್ದು, ಆರ್ ಆರ್ ಆಸ್ಪತ್ರೆಯ 7 ಜನರ ವೈದ್ಯರ ತಂಡ ಕೊಪ್ಪದ್  ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ನಿನ್ನೆ ರಾತ್ರಿ ನಾವು ಆತನನ್ನು ಐಸಿಯುನಲ್ಲಿ ನೋಡಿದ್ದೇವೆ. ಬುಧವಾರ ಬೆಳಗ್ಗೆ ಮತ್ತೆ 4 ಮಂದಿಗೆ ನೋಡಲು ಅವಕಾಶ ನೀಡಿದ್ದಾರೆ. ನಾವು ಆರು ಮಂದಿ ಬೆಟಗೇರಿಯಿಂದ ದೆಹಲಿಯ ಆರ್ ಆರ್ ಆಸ್ಪತ್ರೆಗೆ ಆಗಮಿಸಿದ್ದೇವೆ. ಕೊಪ್ಪದ್ ಸ್ಥಿತಿ ಬಗ್ಗೆ ಹೇಳಲು ಇನ್ನೂ 3, 4 ದಿನ ಬೇಕೆಂದು ವೈದ್ಯರು ಹೇಳಿರುವುದಾಗಿ ಹನುಮಂತ ಕೊಪ್ಪದ್ ಸಂಬಂಧಿ ಸುಭಾಷ್ ಅವರು ಮಾಧ್ಯಮಕ್ಕೆ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT