ಕುತೂಹಲಕಾರಿ ಉಪಚುನಾವಣೆ ಮತಎಣಿಕೆ ಆರಂಭ 
ಪ್ರಧಾನ ಸುದ್ದಿ

ಕುತೂಹಲಕಾರಿ ಉಪಚುನಾವಣೆ ಮತಎಣಿಕೆ ಪ್ರಕ್ರಿಯೆ ಆರಂಭ

ರಾಜ್ಯ ಸರ್ಕಾರ ಹಾಗೂ ಪಕ್ಷಗಳ ಪ್ರತಿಷ್ಠೆ ಎನಿಸಿಕೊಂಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದ್ದು, ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ...

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಪಕ್ಷಗಳ ಪ್ರತಿಷ್ಠೆ ಎನಿಸಿಕೊಂಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದ್ದು, ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. 
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ವಿರೋಧ ಪಕ್ಷ ಬಿಜೆಯಲ್ಲಿ ಟಿಕೆಟ್ ಹಂಚಿಕೆಯಿಂದ ಹಿಡಿದು ಪ್ರಚಾರ ಕಾರ್ಯದವರೆಗೂ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಈ ಉಪಚುನಾವಣೆ ಈಗ ಎಲ್ಲ ನಾಯಕ ಬಂಡವಾಳವನ್ನು ಬಯಲು ಮಾಡಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಫಲಿತಾಶ ಏನೇ ಆದರೂ ಆಯಾ ಪಕ್ಷಗಳಲ್ಲಿ ಬದಲಾವಣೆಯನ್ನೇ ತರಲಿದೆ ಎಂದು ಹೇಳಲಾಗುತ್ತಿದೆ. 
ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, 719 ಮತಗಳಿಂದ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ. ಇದರಂತೆ ಇದೀಗ ತಿಳಿದುಬಂದಿರುವ ಮಾಹಿತಿಗಳ ಪ್ರಕಾರ ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಅವರು ಮೂರನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಶರೀಫ್ ಅವರಿಗೆ ಹಿನ್ನಡೆಯುಂಟಾಗಿದೆ. ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ  ಶಿವನಗೌಡ ನಾಯಕ್ ಮುನ್ನಡೆ  ಸಾಧಿಸಿದ್ದಾರೆ. ಬೀದರ್ ನಲ್ಲೂ ಬಿಜೆಪಿ ಅಭ್ಯರ್ಥಿ ರಹೀವಾನ್ ಮುನ್ನಡೆ ಸಾಧಿಸಿದ್ದಾರೆಂದು ತಿಳಿದುಬಂದಿದೆ. 
ಬಿಜೆಪಿ ಶಾಸಕ ಜಗದೀಶ್ ಕುಮಾರ್ ನಿಧನದಿಂದ ತೆರವಾಗಿದ್ದ ಹೆಬ್ಬಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಅಬ್ದುಲ್ ರೆಹಮಾನ್ ಷರೀಫ್, ಬಿಜೆಪಿಯಿಂದ ವೈ.ಎ. ನಾರಾಯಣಸ್ವಾಮಿ ಹಾಗೂ ಜೆಡಿಎಸ್ ನಿಂದ ಇಸ್ಮಾಯಿಲ್ ಷರೀಫ್ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಇನ್ನು ಬೀದರ್ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ನಿಧನದಿಂದ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್ ನಿಂದ ರಹೀಂಖಾನ್, ಬಿಜೆಪಿಯಿಂದ ಪ್ರಕಾಶ್ ಖಂಡ್ರೆ ಹಾಗೂ ಜೆಡಿಎಸ್ ನಿಂದ ಮಹಮ್ಮದ್ ಅಯಾಜ್ ಖಾನ್ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. 
ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ವೆಂಕಟೇಶಅ ನಾಯ್ಕ್ ನಿಧನದಿಂದ ತೆರವಾಗಿದ್ದ ದೇವದುರ್ಗ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಥೆ ಇದೇ ಎಂದೇ ಹೇಳಲಾಗುತ್ತಿದೆ. ಮಾಜಿ ಸಚಿವ ಶಿವನಗೊಡ ನಾಯಕ್ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಹಿಂದೆ ಇದೇ ಕ್ಷೇತ್ರ ಪ್ರತಿನಿಧಿಸಿದ್ದರು. ಕಾಂಗ್ರೆಸ್ ನಿಂದ ವೆಂಕಟೇಶ್ ನಾಯಕ್ ಪುತ್ರ ರಾಜಶೇಖರ್ ನಾಯಕ್ ತಮ್ಮ ತಂದೆಯ ಸ್ಥಾನವನ್ನು ಉಳಿಸಿಕೊಳ್ಳುತ್ತಾರಾ? ಎಂಬ ಕುತೂಹಲ ಮೂಡಿದೆ. ಜೆಡಿಎಸ್ ನಿಂದ ಸ್ಪರ್ಥಿಸಿರುವ ಕರಿಯಮ್ಮ ನಾಯಕ್ ಅವರನ್ನು ಕೂಡ ಹಗುರವಾಗಿ ಪರಿಗಣಿಸುವಂತಿಲ್ಲ. ಈ ವರೆಗೆ 2 ಕ್ಷೇತ್ರಗಳನ್ನು ಬಿಜೆಪಿ ಹಾಗೂ 1 ಕ್ಷೇತ್ರವನ್ನು ಕಾಂಗ್ರೆಸ ಪಕ್ಷ ಗೆದ್ದಿದ್ದ ಈ 3 ಕ್ಷೇತ್ರಗಳ ಪೈಕಿ ಯಾವ ಪಕ್ಷ ಎಷ್ಟು ಕಳೆದುಕೊಳ್ಳುತ್ತದೆ ಮತ್ತು ಎಷ್ಟು ಗಳಿಸುತ್ತದೆ ಎಂಬುದು ಸದ್ಯದ ಕುತೂಹಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...