ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸುತ್ತಿದೆ: ಕೇಜ್ರಿವಾಲ್

ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಮತ್ತೆ ಗಲಭೆಗಳಾಗಿ ಜೆ ಎನ್ ಯು ಪರ ಪ್ರತಿಭಟನಕಾರರ ಮತ್ತು ಪತ್ರಕರ್ತರ ಮೇಲೆ ಮತ್ತೆ ಕೆಲವು ವಕೀಲರು ಹಲ್ಲೆ ಮಾಡಿರುವ ಹಿನ್ನಲೆಯಲ್ಲಿ,

ನವದೆಹಲಿ: ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಮತ್ತೆ ಗಲಭೆಗಳಾಗಿ ಜೆ ಎನ್ ಯು ಪರ ಪ್ರತಿಭಟನಕಾರರ ಮತ್ತು ಪತ್ರಕರ್ತರ ಮೇಲೆ ಮತ್ತೆ ಕೆಲವು ವಕೀಲರು ಹಲ್ಲೆ ಮಾಡಿರುವ ಹಿನ್ನಲೆಯಲ್ಲಿ, ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯ ಈ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಲಿದ್ದೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವಿದ್ದರು ಪಟಿಯಾಲ ಹೌಸ್ ಕೋರ್ಟ್ ಆವರಣದಲ್ಲಿ ಶಾಂತಿ ಕಾಪಾಡಲು ವಿಫಲರಾದ ದೆಹಲಿ ಪೊಲೀಸ್ ಕಮಿಷನರ್ ವಿರುದ್ಧ ಹರಿಹಾಯ್ದಿರುವ ಆಮ್ ಆದ್ಮಿ ಪಕ್ಷದ ಮುಖಂಡ ಕಳವಳ ವ್ಯಕ್ತಪಡಿಸಿದ್ದಾರೆ. ಜೆ ಎನ್ ಯು ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷ ಕನ್ಹಯ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಯಲಕ್ಕೆ ಹಾಜರು ಪಡಿಸಲು ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಅವರ ಮೇಲೆ ಕೂಡ ಕೆಲವರು ದಾಳಿ ನಡೆಸಿದ್ದರು. ಕನ್ಹಯ ಅವರನ್ನು ಮಾರ್ಚ್ ೨ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

"ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ ಆದೇಶವನ್ನು ಮನ್ನಿಸಿಲ್ಲ. ಬಸ್ಸಿ ಮನಬಂದಂತೆ ವರ್ತಿಸುತ್ತಿದ್ದಾರೆ. ಅವರ ಈ ಆತ್ಮವಿಶ್ವಾಸಕ್ಕೆ ಕಾರಣವೇನು? ಅವರ ಬಾಸ್ ಗಳು ಯಾವ ರೀತಿಯ ಸೂಚನೆ ನೀಡಿದ್ದಾರೆ?" ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ದೆಹಲಿ ಸರ್ಕಾರದ ಸುಪರ್ದಿಗೆ ಒಳಪಡುವುದಿಲ್ಲ ಬದಲಾಗಿ ಕೇಂದ್ರ ಸರ್ಕಾರದ ಆದೇಶವನ್ನು ಪಾಲಿಸುತ್ತಾರೆ. ದೆಹಲಿಯ ಆಡಳಿತದ ಬಗ್ಗೆ ದೆಹಲಿ ಮತ್ತು ಕೇಂದ್ರ ಸರ್ಕಾರಗಳು ತಿಕ್ಕಾಟಕ್ಕೆ ಬಿದ್ದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT