ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಪೊಲೀಸರಿಂದ ಭದ್ರತೆ
ದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಸರ್ಕಾರ ಪೊಲೀಸ್ ಭದ್ರತೆ ಒದಗಿಸಿದೆ.
ಪಾಟ್ನಾ: ದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಪೋಷಕರಿಗೆ ಬಿಹಾರ ಸರ್ಕಾರ ಪೊಲೀಸ್ ಭದ್ರತೆ ಒದಗಿಸಿದೆ.
ಫೆ.17 ರಂದು ದೆಹಲಿ ನ್ಯಾಯಾಲಯದಲ್ಲಿ ಕನ್ಹಯ್ಯ ಕುಮಾರ್ ಮೇಲೆ ಹಲ್ಲೆ ನಡೆದ ನಂತರ ಬಿಹಾರದ ಬೆಗುಸರೈನಲ್ಲಿರುವ ಆತನ ಪೋಷಕರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೆಎನ್ ಯು ನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಕನ್ಹಯ್ಯ ಕುಮಾರ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿದೆ.
ಕನ್ಹಯ್ಯ ಕುಮಾರ್ ಮೇಲೆ ಹಲ್ಲೆ ನಡೆದ ಕೆಲವೇ ಗಂಟೆಗಳಲ್ಲಿ ಎಚ್ಚೆತ್ತ ಬೆಗುಸರೈ ನಲ್ಲಿರುವ ಬಿಹಾರ ಪೊಲೀಸರು ಅಲ್ಲಿನ ಸ್ಥಳಿಯ ಅಧಿಕಾರಿಗಳಿಗೆ ಕನ್ಹಯ್ಯ ಕುಮಾರ್ ಪೋಷಕರಿಗೆ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.