ರಾಂಚಿ: ಭದ್ರತಾ ಪಡೆಗಳು ಜಾರ್ಖಂಡ್‌ನಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯೊಬ್ಬರು ಸೇರಿದಂತೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ರಾತ್ರಿ ನವಾದಿಹ್ ಅರಣ್ಯದ ಗಡಿಯಲ್ಲಿರುವ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ರಾಂಚಿಯಿಂದ 35 ಕಿಲೋ ಮೀಟರ್ ದೂರದ ರಾಂಚಿ–ಜೆಮ್‌ಶ್ಷೆಡ್‌ಪುರ ರಾಷ್ಟ್ರೀಯ ಹೆದ್ದಾರಿ 33ರಲ್ಲಿರುವ ಘಗ್ರಾಬೆಡಾ ಗ್ರಾಮದಲ್ಲಿ ಈ ಎನ್‌ಕೌಂಟರ್ ನಡೆದಿದೆ ಎಂದು ಗ್ರಾಮೀಣ ವಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜಕುಮಾರ್ ಲಕ್ರಾ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಅರಣ್ಯದಲ್ಲಿ ನಕ್ಸಲರು ಸೇರಿರುವ ಕುರಿತು ಖಚಿತ ಸುಳಿವಿನ ಮೇರೆಗೆ ಜಿಲ್ಲಾ ಸಶಸ್ತ್ರ ಹಾಗೂ ಸಿಆರ್‌ಪಿಎಫ್ ಸೇರಿಕೊಂಡು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ ಎಂದು ಲಕ್ರಾ ಅವರು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ತಲಾ ಎರಡು ಎಸ್‌ಎಲ್‌ಆರ್‌ಗಳು ಹಾಗೂ 303 ರೈಫಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. .