ಜಾಟ್ ಸಮುದಾಯದ ಆಕ್ರೋಶಕ್ಕೆ ಸುಟ್ಟು ಕರಕಲಾದ ಅಂಗಡಿಗಳು
ನವದೆಹಲಿ: ಜಾಟ್ ಸಮುದಾಯ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 8 ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಮಧ್ಯಪ್ರವೇಶಿಸಿದ ಕೇಂದ್ರ ಸರ್ಕಾರ, ಭಾನುವಾರ ಜಾಟ್ ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮತಿಯನ್ನು ರಚಿಸಿದೆ.
ಜಾಟ್ ಸಮುದಾಯ ಮೀಸಲಾತಿ ಬೇಡಿಕೆಗಳ ಪರಿಶೀಲನೆಗೆ ಕೇಂದ್ರ ಸರ್ಕಾರ ನಗರಾಭಿವೃದ್ಧಿ ಸಚಿವ ಎಂ ವೆಂಕಯ್ಯನಾಯ್ಡು ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ಈ ಮೂಲಕ ಜಾಟ್ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಸ್ವಲ್ಪ ಮಟ್ಟಿಗೆ ತಗ್ಗಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಹರಿಯಾಣದ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಕ್ಕೆ ಜಾಟ್ ಸಮುದಾಯವನ್ನು ಸೇರಿಸವುದಕ್ಕೆ ಸಂಬಂಧಿಸಿದ ಮಸೂದೆಯನ್ನು ವಿಧಾನಸಭೆಯ ಮುಂಬರುವ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಹರಿಯಾಣದ ಬಿಜೆಪಿ ಉಸ್ತುವಾರಿ ಅನಿಲ್ ಜೈನ್ ತಿಳಿಸಿದ್ದಾರೆ. ಜಾಟ್ ಸಮುದಾಯದ ಮುಖಂಡರು ಗೃಹಮಂತ್ರಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.