ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರನ್ನು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ನೇಮಕ ಮಾಡಲಾಗಿದೆ.
ಸೇವಾ ಹಿರಿತನ ಪರಿಗಣಿಸಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಎಸ್. ಕೆ. ಮುಖರ್ಜಿ ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.
ಎಸ್.ಕೆ.ಮುಖರ್ಜಿ ಅವರು ಮಂಗಳವಾರ ಸಂಜೆ ರಾಜಭವನದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೂಲತಃ ಕೋಲ್ಕತಾ ಹೈಕೋರ್ಟ್ ನಲ್ಲಿ ಹಿರಿಯ ನ್ಯಾಯಮೂರ್ಥಿಗಳಾಗಿದ್ದ ಮುಖರ್ಜಿ ಅವರು ಏಪ್ರಿಲ್ 15ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.