ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ 
ಪ್ರಧಾನ ಸುದ್ದಿ

ಜೆ ಎನ್ ಯು ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಕನ್ಹಯ್ಯ ಎಂದ ದೆಹಲಿ ಪೊಲೀಸರು

ದೇಶದ್ರೋಹದ ಆರೋಪದಲ್ಲಿ ಬಂಧಿತರಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿದ ಕಾರ್ಯಕ್ರಮದಲ್ಲಿ

ನವದೆಹಲಿ: ದೇಶದ್ರೋಹದ ಆರೋಪದಲ್ಲಿ ಬಂಧಿತರಾಗಿರುವ ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಷ್ಟೇ ಅಲ್ಲ, ಆ ಕಾರ್ಯಕ್ರಮವನ್ನು ಆಯೋಜಿಸಿದ್ದರು ಕೂಡ ಅವರೇ ಎಂದು ದೆಹಲಿ ಹೈಕೋರ್ಟ್ ಗೆ ದೆಹಲಿ ಪೊಲೀಸರು ಹೇಳಿದ್ದಾರೆ.

ನ್ಯಾಯಮೂರ್ತಿ ಪ್ರತಿಭಾ ರಾಣಿ ಅವರ ಮುಂದೆ ಹಾಜರುಪಡಿಸಿದ 13 ಪುಟಗಳ ವರದಿಯಲ್ಲಿ ಕನ್ಹಯ್ಯ ಅಲ್ಲದೆ ಆರೋಪ ಪಟ್ಟಿಯಲ್ಲಿರುವ ಇತರರು ವಿದೇಶಿಗರಾಗಿದ್ದು ಅವರು ಕೂಡ ಫೆಬ್ರವರಿ ೯ ರ ಜೆ ಎನ್ ಯು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಆದರೆ ಅವರು ತಮ್ಮ ಗುರುತು ಕಾಣದಂತೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರು ಎಂದು ತಿಳಿಸಿದ್ದಾರೆ.

ತನಿಖೆಯ ವೇಳೆಯಲ್ಲಿ ಸ್ಥಳದಲ್ಲಿ ಹಾಜರಿದ್ದ ಹಲವಾರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಈ ತನಿಖೆಯ ವೇಳೆಯಲ್ಲಿ ತಿಳಿದಿರುವ ಅಂಶವೆಂದರೆ ಜಾಮೀನಿಗೆ ಅರ್ಜಿ ಸಲ್ಲಿಸಿರುವ ಕನ್ಹಯ್ಯ ಈ ಕಾರ್ಯಕ್ರಮದಲ್ಲಿ ಇದ್ದುದಷ್ಟೇ ಅಲ್ಲ, ಅದರ ಆಯೋಜಕ ಕೂಡ ಎಂದು ಪೊಲೀಸ್ ವರದಿ ತಿಳಿಸಿದೆ.

ಅಲ್ಲದೆ "ಫೆಬ್ರವರಿ ೯ ರಂದು ನಡೆದ ಈ ಕಾರ್ಯಕ್ರಮದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿ ಕುಳಿತಿದ್ದ ವಿದೇಶಿ ಆರೋಪಿಗಳು ಮತ್ತು ಕನ್ಹಯ್ಯ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಸಲಾಗುತ್ತಿದೆ" ಎಂದು ಕೂಡ ವರದಿ ತಿಳಿಸಿದೆ.

ಕನ್ಹಯ್ಯ ಅವರಿಗೆ ಜಾಮೀನು ನೀಡಲು ವಿರೋಧ ವ್ಯಕ್ತಪಡಿಸಿದ ಪೊಲೀಸರು, ಈ ವಿಷಯ ಭಾರತವಷ್ಟೇ ಅಲ್ಲ ಜಾಗತಿಕವಾಗಿ ಪರಿಣಾಮ ಬೀರಲಿದೆ. ಈ ಸಮಯದಲ್ಲಿ ಆರೋಪಿಗೆ ಜಾಮೀನು ಸಿಕ್ಕಲ್ಲಿ ವಿಚಾರಣೆಗೆ ಅಡ್ಡಿ ಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

"ತಮಗೆ ಸಿಕ್ಕಿರುವ ವಿಡಿಯೋ ತಿರುಚಲಾಗಿದ್ದರೂ, ನಮ್ಮ ತನಿಖೆ ವಿಡಿಯೋ ದೃಷ್ಟಿಯಲ್ಲಿ ಮಾತ್ರ ಮುನ್ನಡೆದಿಲ್ಲ" ಎಂದು ಪೊಲೀಸರು ತಿಳಿಸಿದ್ದು, ಕನ್ಹಯ್ಯ ಅವರ ಜಾಮೀನು ವಿಚಾರಣೆಯನ್ನು ನ್ಯಾಯಾಧೀಶರು ಫೆಬ್ರವರಿ ೨೯ಕ್ಕೆ ಮುಂದೂಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್