ಜಾಟ್ ಪ್ರತಿಭಟನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮೀಸಲಾತಿ ಪ್ರತಿಭಟನೆಯಿಂದ ಹೂಡಿಕೆ ಮೇಲೆ ಪರಿಣಾಮ: ಹರ್ಯಾಣ ಮೂಲದ ಎನ್ ಆರ್ ಐ ಗಳ ಆತಂಕ

ಮೀಸಲಾತಿಗಾಗಿ ಹರ್ಯಾಣದಲ್ಲಿ ಜಾಟ್ ಸಮುದಾಯ ನಡೆಸಿದ ಪ್ರತಿಭಟನೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ಪರಿಣಾಮ ಬೀರಲಿದೆ ಹರ್ಯಾಣ ಮೂಲದ ಎನ್ ಆರ್ ಐ ಗಳು ಆತಂಕ

ಟೋರಂಟೊ: ಮೀಸಲಾತಿಗಾಗಿ ಹರ್ಯಾಣದಲ್ಲಿ ಜಾಟ್ ಸಮುದಾಯ ನಡೆಸಿದ ಪ್ರತಿಭಟನೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಹರ್ಯಾಣ ಮೂಲದ ಎನ್ ಆರ್ ಐ ಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಜಾಟ್ ಸಮುದಾಯದ ಪ್ರತಿಭಟನೆ ರಾಜ್ಯದಲ್ಲಿ ಹೂಡಿಕೆ ಮೇಲೆ ಪರಿಣಾಮ ಬೀರುವುದರಿಂದ ರಾಜ್ಯದಲ್ಲಿರುವ 36 ಸಮುದಾಯಗಳು ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಹರ್ಯಾಣ ಮೂಲದ ಎನ್ ಆರ್ ಐ ಗಳು ಮನವಿ ಮಾಡಿದ್ದಾರೆ. 
ಕೆನಡಾದಲ್ಲಿರುವ ಹರ್ಯಾಣ ನಿವಾಸಿಗಳ ಸಾಗರೋತ್ತರ ಸಂಘಟನೆ ಹೇಳಿಕೆಯೊಂದನ್ನು ಬಿಡುಗಡೆಮಾಡಿದ್ದು, " ರಾಷ್ಟ್ರ ಹಾಗೂ ರಾಜ್ಯದ ಹಿತಾಸಕ್ತಿ ದೃಷ್ಟಿಯಿಂದ ರಾಜ್ಯದಲ್ಲಿರುವ ಎಲ್ಲಾ 36 ಸಮುದಾಯಗಳು ಶತಮಾನಗಳಿಂದ ಬಂದಿರುವ ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು" ಎಂದು  ಹರ್ಯಾಣ ಮೂಲದ ಎನ್ ಆರ್ ಐ ಗಳು ಮನವಿ ಮಾಡುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.  
ಜಾಟ್ ಮೀಸಲಾತಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಹರ್ಯಾಣದ ಘನತೆಯನ್ನು ಕುಗ್ಗಿಸಿದೆ, ಇದು ಹೂಡಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಹರ್ಯಾಣ ಮೂಲದ ನಿವಾಸಿಗಳ ಸಾಗರೋತ್ತರ ಸಂಘಟನೆ ಆತಂಕ ವ್ಯಕ್ತಡಿಸಿದೆ. ಪ್ರತಿಭಟನೆಯಿಂದ ಸಾಮಾನ್ಯ ಜನರಿಗೆ ಯಾವುದೇ ಲಾಭವಾಗುವುದಿಲ್ಲ. ಬದಲಾಗಿ ಸಂಪತ್ಭರಿತ ರಾಜ್ಯದಲ್ಲಿ ನಿರುದ್ಯೋಗ, ಬಡತನವನ್ನು ಹೆಚ್ಚು ಮಾಡುತ್ತದೆ ಎಂದು ಅನಿವಾಸಿ ಭಾರತೀಯರ ಸಂಘಟನೆ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!