ಪ್ರಧಾನ ಸುದ್ದಿ

ಸ್ಟ್ಯಾಂಡ್ ಅಪ್ ಇಂಡಿಯಾಗೆ ಅಸ್ತು: ರು.500 ಕೋಟಿ ಮೀಸಲು

Manjula VN

ನವದೆಹಲಿ: ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಯೋಜನೆಗಾಗಿ ಕೇಂದ್ರ ಸರ್ಕಾರ ರು.500 ಕೋಟಿ ಹಣವನ್ನು ಮೀಸಲಿಟ್ಟಿದೆ.

ಇಂದು ಘೋಷಣೆಯಾದ ಕೇಂದ್ರ ಬಜೆಟ್ ನಲ್ಲಿ ಈ ಬಗ್ಗೆ ಮಾತನಾಡಿರು ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸ್ಟ್ಯಾಂಡ್ ಅಪ್ ಇಂಡಿಯಾಗೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳಾ ಉದ್ಯಮಿಗಳಿಗೆ ಬ್ಯಾಂಕುಗಳ ಮೂಲಕ ಹಣಕಾಸಿನ ನೆರವು ನೀಡಲಾಗುತ್ತದೆ. ಇದರಂತೆ ಪ್ರತಿ ಬ್ಯಾಂಕ್ ಖಾತೆಯಲ್ಲಿ 2 ಯೋಜನೆಗಳಿಗೆ ಸಾಲವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಪ್ರತಿ ಕುಟುಂಬಕ್ಕೆ 1 ಲಕ್ಷದವರೆಗೆ ಆರೋಗ್ಯ ವಿಮೆಯನ್ನು ಒದಗಿಸಲು ಚಿಂತನೆ ನಡೆಸಲಾಗಿದ್ದು, ಪ್ರಧಾನಮಂತ್ರಿ ಜನ ಔಷಧಿ ಯೋಜನೆಯಡಿಯಲ್ಲಿ 300ಕ್ಕೂ ಹೆಚ್ಚು ಜೀವರಕ್ಷಕ ಔಷಧ ಅಂಗಡಿಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸಾಕ್ಷರತೆ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ತೆರಿಗೆ ವಂಚನೆ ತಡೆಯಲು ಮತ್ತು ತೆರಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸಲು ದತ್ತಾಂಶ ನಿರ್ವಹಣೆ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

SCROLL FOR NEXT