ಮೈಸೂರು: ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಭೇಟಿಗಾಗಿ ಶನಿವಾರ ಮೈಸೂರಿಗೆ ಆಗಮಿಸುವರು.
ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸಂಜೆ 5.30ಕ್ಕೆ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ, ಆಸ್ಪತ್ರೆ ಉದ್ಘಾಟಿಸುವರು.
ಸಂಜೆ 6.15ಕ್ಕೆ ಮಹಾರಾಜ ಕಾಲೇಜಿನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.4ರಂದು 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಉದ್ಘಾಟಿಸುವರು.