ಹುತಾತ್ಮ ಯೋಧ ನಿರಂಜನ್ ಕುಮಾರ್ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ
ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಬೆಂಗಳೂರಿನಲ್ಲಿರುವ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಅವರಿಗೆ...
ಬೆಂಗಳೂರು: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಬೆಂಗಳೂರಿನಲ್ಲಿರುವ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಿದರು.
ಬೆಂಗಳೂರಿನ ವಿದ್ಯಾರಣ್ಯಪುರ ರಸ್ತೆಯಲ್ಲಿರುವ ಬಿಇಎಲ್ ಶಾಲಾ ಮೈದಾನದಲ್ಲಿ ಹುತಾತ್ಮ ಯೋಧ ನಿರಂಜನ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ ಅವರು ನಿರಂಜನ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 30 ಲಕ್ಷ ಪರಿಹಾರ ಘೋಷಿಸಿದರು.
ಕೇಂದ್ರ ಸಚಿವ ಸದಾನಂದಗೌಡ, ಸಚಿವ ಹೆಚ್. ಸಿ ಮಹದೇವಪ್ಪ ಸೇರಿ ಪ್ರಮುಖರು ಅಂತಿಮ ದರ್ಶನ ಪಡೆದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.