ಕರ್ನಾಟಕ ಹೈಕೋರ್ಟ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಕೆಐಎಡಿಬಿ ಹಗರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಟುಂಬದ ಸದಸ್ಯರ ಆಸ್ತಿ ಮುಟ್ಟುಗೋಲಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊರಡಿಸಿದ್ದ ಆದೇಶ ರದ್ದು ಗೊಳಿಸುವಂತೆ ಕೋರಿ...

ಬೆಂಗಳೂರು: ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಟುಂಬದ ಸದಸ್ಯರ ಆಸ್ತಿ ಮುಟ್ಟುಗೋಲಿಗೆ ಜಾರಿ ನಿರ್ದೇಶನಾಲಯ(ಇಡಿ) ಹೊರಡಿಸಿದ್ದ  ಆದೇಶ ರದ್ದು ಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಅವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವಾದ-ಪ್ರತಿವಾದ ಆಲಿಸಿದ ನ್ಯಾ.ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ತೀರ್ಪು  ಕಾಯ್ದಿರಿಸಿತು. ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಆಧರಿಸಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಪತ್ನಿ ಸೌಭಾಗ್ಯ ನಾಯ್ಡು, ಪುತ್ರಿ ಜಲಜಾ, ಅಳಿಯ  ಜಗದೀಶ್ ಚಂದ್ರ ಪ್ರಕಾಶ್ ಹಾಗೂ ಅವರ ಮಾಲೀಕತ್ವದ ಇಟಾಸ್ಕ ಕಂಪನಿ ಎಂಡಿ ಶ್ರೀನಿವಾಸ್‍ಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳಲು ಜಾರಿ ನಿರ್ದೇಶನಾಲಯ 2013ರ ಫೆ.23ರಂದು 87 ಪುಟಗಳ ಆದೇಶ ಹೂಡಿತ್ತು.

ಈ ಆದೇಶ ರದ್ದು ಕೋರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತವರ ಕುಟುಂಬ ಸದಸ್ಯರು 2013ರ ಮಾ.30ರಂದು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಏ.4 ರಂದು ಜಾರಿ  ನಿರ್ದೇಶಾನಾಲಯದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್