ನವದೆಹಲಿ: ಗುಜರಾತ್ ಪ್ರವಾಸೋದ್ಯಮದ ರಾಯಭಾರಿಯಾಗಿರುವ ಮೆಗಾಸ್ಚಾರ್ ಅಮಿತಾಭ್ ಬಚ್ಚನ್ ಅವರೇ ಈಗ 'ಇನ್ಕ್ರೆಡಿಬಲ್ ಇಂಡಿಯಾ'ದ ಪ್ರಚಾರ ರಾಯಭಾರಿ ಸ್ಥಾನಕ್ಕೆ ನರೇಂದ್ರ ಮೋದಿ ಸರ್ಕಾರದ ಮೊದಲ ಆಯ್ಕೆಯಾಗಿದ್ದಾರೆ.
ಇನ್ಕ್ರೆಡಿಬಲ್ ಇಂಡಿಯಾದ ರಾಯಭಾರಿಯಾಗಿರುವ ಬಾಲಿವುಡ್ ನಟ ಆಮಿರ್ ಖಾನ್ ಅವರ ಒಪ್ಪಂದದ ಅವಧಿ ಮುಗಿದಿದ್ದು, ಈಗ ಅವರ ಸ್ಥಾನಕ್ಕೆ ಅಮಿತಾಭ್ ಬಚ್ಚನ್ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಪ್ರವಾಸೋದ್ಯಮ ಸಚಿವಾಲಯದ ಮೂಲಗಳು ತಿಳಿಸಿವೆ.
ಇನ್ಕ್ರೆಡಿಬಲ್ ಇಂಡಿಯಾ ರಾಯಭಾರಿ ಸ್ಥಾನಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕ ಚೋಪ್ರಾ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ ಅಮಿತಾಭ್ ಮೊದಲ ಚಾಯ್ಸ್ ಎನ್ನಲಾಗಿದೆ.