ಬೆಂಗಳೂರು: ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಯ್ಯದ್ ರಿಯಾಜ್, ಪತ್ರಕರ್ತ ಶ್ರೀನಿವಾಸ ಗೌಡ, ಶಂಕರೇಗೌಡ ಮತ್ತು ಭಾಸ್ಕರ್‍ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನಿರಾಕರಿಸಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿನಾಕಿ ಚಂದ್ರಘೋಷ್, ನ್ಯಾ ಅಮಿತಾವ್ ರಾಯ್ ಅವರಿದ್ದ ದ್ವಿಸದಸ್ಯಪೀಠ, 'ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಗಂಭೀರವಾದದ್ದು. ಹೀಗಾಗಿ ಪ್ರಕರಣದ ತನಿಖೆ ಪೂರ್ಣವಾಗುವವರೆಗೆ ಆರೋಪಿಗಳಿಗೆ ಜಾಮೀನು ನೀಡಲು ಸಾಧ್ಯವಿಲ್ಲ,'' ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಇನ್ನು ಆರು ವಾರಗಳಲ್ಲಿ ಹೆಚ್ಚುವರಿ ಚಾರ್ಜ್‍ಶೀಟ್ ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಹತ್ತು ವಾರಗಳ ಕಾಲ ಮುಂದೂಡಿದೆ.