ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ಪಿಎಚ್‌ಡಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ವಿವಿ ಕುಲಪತಿ ರಾಜಿನಾಮೆಗೆ ರಾಹುಲ್ ಆಗ್ರಹ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ವಿವಿ ಕುಲಪತಿ ಪಿ.ಅಪ್ಪಾ ರಾವ್...

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ವಿವಿ ಕುಲಪತಿ ಪಿ.ಅಪ್ಪಾ ರಾವ್ ಅವರು ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಒತ್ತಾಯಿಸಿದ್ದಾರೆ.
ಇಂದು ವಿವಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಾಗೂ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ತಾಯಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಪ್ರಕರಣ ಸಂಬಂಧ ಕುಲಪತಿ ಹಾಗೂ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ವಿರುದ್ಧ ತೀವ್ರ ಅಸಮಾಧನ ವ್ಯಕ್ತಪಡಿಸಿದರು. ಕೇಂದ್ರ ಸಚಿವರು ಹಾಗೂ ಕುಲಪತಿಗಳು ರೋಹಿತ್ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದರು ಎಂದು ಆರೋಪಿಸಿದರು. ಅಲ್ಲದೆ ರೋಹಿತ್ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕು ಎಂಬ ಕನಿಷ್ಠ ಜ್ಞಾನವೂ ಕುಲಪತಿಯವರಿಗೆ ಇಲ್ಲ. ಹೀಗಾಗಿ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯು ಯೋಗ್ಯತೆ ಇಲ್ಲ. ಈ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು. 
ಇದೇ ವೇಳೆ ಜಾತಿ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಬೇರೆ ಬೇರೆ ಮಾಡಬೇಡಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT