ಬೆಂಗಳೂರು: ಗಣರಾಜ್ಯ ದಿನದಂದು ಮುಖ್ಯ ಅತಿಥಿಯಾಗಿ ಭಾರತಕ್ಕೆ ಫ್ರಾನ್ಸ್ ನ ಅಧ್ಯಕ್ಷ ಹಾಲೆಂಡೆ ಅವರು ಆಗುಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯಿರುವ ಫ್ರಾನ್ಸ್ ರಾಯಭಾರಿ ಕಚೇರಿ ಮೇಲೆ ದಾಳಿ ಮಾಡುವ ಬೆದರಿಕೆ ಪತ್ರ ಬಂದಿದೆ.
ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಇಸಿಸ್) ಉಗ್ರ ಸಂಘಟನೆಯ ಹೆಸರಲ್ಲಿ ಬೆಂಗಳೂರಿನ ಫ್ರಾನ್ಸ್ ರಾಯಭಾರಿ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದು, ಈ ಬಗ್ಗೆ ಹೈಗ್ರೌಂಡ್ಸ್ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆದರಿಕೆ ಪತ್ರ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚೆನ್ನೈ ವಿಳಾಸದಿಂದ ಬೆಂಗಳೂರಿಗೆ ಬೆದರಿಕೆ ಪತ್ರ ಬಂದಿದ್ದು. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಜನವರಿ 11 ರಂದು ರಾಯಭಾರಿ ಕಚೇರಿಗೆ ಬೆದರಿಕೆ ಪತ್ರ ಬಂದಿದ್ದು, ಜನವರಿ 14 ರಂದು ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.