ಶಂಕಿತ ಉಗ್ರರ ಸೆರೆ(ಸಾಂದರ್ಭಿಕ ಚಿತ್ರ) 
ಪ್ರಧಾನ ಸುದ್ದಿ

ಉಗ್ರರ ತವರಾಗುತ್ತಿದೆಯೇ ಕರ್ನಾಟಕ? ಮತ್ತೆ 4 ಶಂಕಿತ ಉಗ್ರರ ಬಂಧನ

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದ ಮೇಲೆ ಮುಂಬೈ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಕರ್ನಾಟದಾದ್ಯಂತ...

ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪದ ಮೇಲೆ ಮುಂಬೈ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಕರ್ನಾಟದಾದ್ಯಂತ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳ(ಎನ್ಐಎ) ಮಾರ್ಗದರ್ಶನ ಮೇರೆಗೆ ಎಟಿಎಸ್ ಅಧಿಕಾರಿಗಳು ತಡರಾತ್ರಿ ಕಾರ್ಯಾಚರಣೆ ಕೈಗೊಂಡಿದ್ದು, ಮಂಗಳೂರಿನಲ್ಲಿ ನಜ್ಮೂಲ್ ಹುದಾ, ತುಮಕೂರಿನಲ್ಲಿ ಸೈಯದ್ ಹುಸೇನ್ ನನ್ನ ಬಂಧಿಸಿದ್ದು, ಇದೀಗ ಬೆಂಗಳೂರಿನ ಸರ್ಜಾಪುರ ರಸ್ತೆಯ ಜಕ್ಕಸಂದ್ರದಲ್ಲಿ ಶಸ್ತ್ರಾಸ್ತ್ರ ಸಮೇತ ಶಂಕಿತ ಇಸಿಸ್ ಉಗ್ರರಿಬ್ಬರ ಬಂಧಿಸಿದ್ದಾರೆ.

ಈ ಶಂಕಿತ ಉಗ್ರರು ಜಕ್ಕಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಎಟಿಎಸ್ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಜನವರಿ 7 ರಂದು ಅಲ್ ಖೈದಾ ಉಗ್ರ ಸಂಘಟನೆ ಪರ ಕೆಲಸ ಮಾಡುತ್ತಿದ್ದ ಮೌಲ್ವಿ ಸೈಯದ್ ಅನ್ಸರ್ ಶಾ ಖಾಸ್ಮಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಖಾಸ್ಮಿ ಮಾಹಿತಿ ಮೇರೆಗೆ ಎಟಿಎಸ್ ಅಧಿಕಾರಿಗಳು ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿ ಶಂಕಿತರನ್ನು ಬಂಧಿಸಲಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಯಂದು ದೇಶಾದ್ಯಂತ ದಾಳಿಗಳನ್ನು ನಡೆಸಲು ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಎಟಿಎಸ್ ದಾಳಿ ನಡೆಸಿ ಶಂಕಿತರನ್ನು ಬಂಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!