ಹೈದರಾಬಾದ್: ಕಳೆದ ಭಾನುವಾರ ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಕುಟುಂಬಕ್ಕೆ ವಿವಿ ಆಡಳಿತ ಮಂಡಳಿ ಶುಕ್ರವಾರ 8 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.
ಈ ಮಧ್ಯೆ ಪ್ರಕರಣದ ತನಿಖೆಗೆ ನ್ಯಾಯಂಗ ಸಮಿತಿ ರಚಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲ(ಎಚ್ಆರ್ ಡಿ)ಯ ಘೋಷಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಆರ್ ಡಿ ತಂಡ ವರದಿ ಸಲ್ಲಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಎಎನ್ಐ ವರದಿ ಮಾಡಿದೆ.
ಈ ನ್ಯಾಯಾಂಗ ಸಮಿತಿ ರೋಹಿತ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ, ಮೂರು ತಿಂಗಳಲ್ಲಿ ತನ್ನ ವರದಿ ಸಲ್ಲಿಸುವ ಸಾಧ್ಯತೆ ಇದೆ.
ವಿವಿಯಿಂದ ಅಮಾನತು ಮಾಡಿದ್ದರಿಂದ ಹಾಗೂ ಹಾಸ್ಟೇಲ್ ಗೆ ನಿಷೇಧ ಹೇರಿದ್ದರಿಂದ ನೊಂದ ಸಂಶೋಧಾನ ವಿದ್ಯಾರ್ಥಿ ರೋಹಿತ್ ವೇಮುಲಾ ಕಳೆದ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದರು.