ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಭಾರತೀಯರ ಪಾಲಿಗೆ ಇದು ಮಹತ್ವದ ದಿನ: ಮೋದಿ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 119ನೇ ಜನ್ಮದಿನಾಚರಣೆಯ ವೇಳೆ ಬೋಸ್‌ಗೆ ಸಂಬಂಧಪಟ್ಟ ಮಹತ್ವದ...

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 119ನೇ ಜನ್ಮದಿನಾಚರಣೆಯ ವೇಳೆ ಬೋಸ್‌ಗೆ ಸಂಬಂಧಪಟ್ಟ ಮಹತ್ವದ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಡುಗಡೆ ಮಾಡಿದ್ದಾರೆ.
ನೇತಾಜಿ ದಾಖಲೆಗಳ ಡಿಜಿಟಲ್ ಪ್ರತಿ ಬಿಡುಗಡೆ ಮಾಡಿದ ಮೋದಿ. ಇಂದು ಎಲ್ಲ ಭಾರತೀಯರ ಪಾಲಿಗೆ ವಿಶೇಷವಾದ ದಿನ. ಇಂದಿನಿಂದ ನೇತಾಜಿಗೆ ಸಂಬಂಧಪಟ್ಟ ದಾಖಲೆಗಳು ಅಂತರ್ಜಾಲದಲ್ಲಿ ಲಭ್ಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ದಶಕಗಳಿಂದ ನಿಗೂಢವಾಗಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್ ಕಣ್ಮರೆ ರಹಸ್ಯ ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ನೇತಾಜಿ ಜನ್ಮದಿನವಾದ  ಜ.23ರಂದು ಅವರಿಗೆ ಸಂಬಂಧಿಸಿದ ಕಡತ ಬಿಡುಗಡೆ ಮಾಡುವುದಾಗಿ ಕಳೆದ ವರ್ಷ ಅ.14ರಂದು ಬೋಸ್ ಕುಟುಂಬದ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. 

ಅದರಂತೆ  ಶನಿವಾರ ಸರ್ಕಾರ ಕಡತ ಬಿಡುಗಡೆ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ತಿಳಿಸಿದ್ದರು.

"ರಾಷ್ಟ್ರೀಯ ದಾಖಲೆಗಳ ಕೇಂದ್ರ (ಎನ್ಐಎ) ನೇತಾಜಿಯವರಿಗೆ ಸಂಬಂಧಿಸಿದ 100 ಕಡತಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಿದೆ. ಡಿಜಿಟಲೀಕರಣ ಮತ್ತು ಇತರ ಕ್ರಮಗಳ ಬಳಿಕ  ಅದು ಎಲ್ಲರಿಗೂ ಲಭ್ಯವಾಗಲಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

1945ರಲ್ಲಿ ತೈವಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿಯೇ ನೇತಾಜಿ ಮೃತಪಟ್ಟಿದ್ದಾಗಿ ಇತ್ತೀಚಿಗಷ್ಟೇ ಬ್ರಿಟನ್ನಿನ ವೆಬ್‌ಸೈಟ್ ವೊಂದು ವರದಿ ಮಾಡಿತ್ತು. ಈ ಸಂಬಂಧ ಅದು  ದಾಖಲೆಯನ್ನೂ ಕೂಡ ಬಿಡುಗಡೆ ಮಾಡಿತ್ತು. ಈ ಬೆಳವಣಿಗೆ ನಡುವೆಯೇ ಶನಿವಾರ ಕೇಂದ್ರ ಸರ್ಕಾರ ದಾಖಲೆ ಬಿಡುಗಡೆ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT