ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ದೂರು, ಬೇಡಿಕೆ,ಪ್ರತಿಭಟನೆ ಮುಂದುವರಿಸೋಣ: ಪ್ರಣಬ್ ಮುಖರ್ಜಿ

ಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ...

ನವದೆಹಲಿ: ಭಯೋತ್ಪಾದನೆಯಲ್ಲಿ ಒಳ್ಳೆಯದ್ದು, ಕೆಟ್ಟದ್ದು ಎಂಬುದಿಲ್ಲ, ಭಯೋತ್ಪಾದನೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋಣ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೆ ನೀಡಿದ್ದಾರೆ.

67ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ಗುಂಡಿನ ಸುರಿಮಳೆ ಕೆಳಗೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದರು. 2015 ರಲ್ಲಿ ಭಾರತಕ್ಕೆ ಅನೇಕ ಸವಾಲುಗಳು ಎದುರಾದವು, ಎಲ್ಲ ಸಮಸ್ಯೆಗಳನ್ನು ಎದುರಿಸಿ ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.

ಯಾವುದೇ ಕಾರಣಕ್ಕೂ ದೇಶದಲ್ಲಿ ಬೇಧ ಭಾವವಿಲ್ಲ, ಎಲ್ಲರೂ ಒಂದೇ ಎಂದು ಹೇಳಿದ ಪ್ರಣಬ್ ಮುಖರ್ಜಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಫ್ ಇಂಡಿಯಾದಿಂದ ಸಂಶೋಧನೆಯಲ್ಲಿ ಪ್ರಗತಿ ಹೊಂದಲಾಗಿದೆ. ಇದೇ ರೀತಿ ಅಭಿವೃದ್ಧಿ ಮುಂದುವರಿದರೇ ಇನ್ನು 20 ವರ್ಷದಲ್ಲಿ ದೇಶದ ಬಚತನ ನಿರ್ಮೂವಲನೆಯಾಗುತ್ತದೆ ಎಂದು ಪ್ರಣಬ್ ಮುಖರ್ಜಿ ತಿಳಿಸಿದರು.

2015 ರಲ್ಲಿ ದೇಶ ಅನೇಕ ಪ್ರಾಕೃತಿಕ ವಿಕೋಪಗಳನ್ನು ಎದರಿಸಿದೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತಿದೆ ಎಂದು ಹೇಳಿದ ಪ್ರಣಬ್ ಮುಖರ್ಜಿ, ದೂರು, ಬೇಡಿಕೆ, ಪ್ರತಿಭಟನೆ ಗಳನ್ನು ಮುಂದುವರಿಸೋಣ ಎಂದು ಹೇಳಿದರು. ದೇಶಕ್ಕಾಗಿ ಹೋರಾಟ ನಡೆಸುತ್ತಿರುವ ಸೈನಿಕರಿಗೆ ರಾಷ್ಟ್ರಪತಿಗಳು ನಮನ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT