ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಖೈದಿಗಳಿಗೆ ಖುಷಿ: ರಾಜ್ಯಾದ್ಯಂತ 375 ಮಂದಿ ಬಿಡುಗಡೆ

ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 375 ಮಂದಿ ಕೈದಿಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಭಾಗ್ಯ ನೀಡಿದೆ...

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿರುವ 375 ಮಂದಿ ಕೈದಿಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಭಾಗ್ಯ ನೀಡಿದೆ.

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 375 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ  ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈಗಾಗಲೇ  ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಈ ಕುರಿತ ಶಿಫಾರಸು ಕಡತ ರವಾನೆಯಾಗಿದ್ದು, 14 ವರ್ಷಕ್ಕೂ ಮೇಲ್ಪಟ್ಟು ಶಿಕ್ಷೆ ಅನುಭವಿಸಿದ ಮಾಫಿ ರಹಿತ 120 ಕೈದಿಗಳು ಹಾಗೂ  ಮಾಫಿ ಸಹಿತ 14 ವರ್ಷ ಶಿಕ್ಷೆಗೊಳಗಾಗಿರುವ ಕೈದಿಗಳು ಸೇರಿ ಒಟ್ಟು 375 ಕೈದಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ಇದರಲ್ಲಿ 13 ಮಹಿಳಾ ಕೈದಿಗಳೂ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಕೈದಿಗಳ ಬಿಡುಗಡೆ ಕುರಿತು ಸಚಿವ ಸಂಪುಟ ಸಮಿತಿಯನ್ನು ರಚಿಸಿ ಅದರ ಅಭಿಪ್ರಾಯಪಡೆಯಲಾಗಿತ್ತು. ಇದಕ್ಕೆ ಆಕ್ಷೇಪಗಳು ಬಂದ ಹಿನ್ನಲೆಯಲ್ಲಿ ವಿಚಾರ ಸುಪ್ರೀಂಕೋರ್ಟ್ ವರೆಗೂ  ಹೋಗಿತ್ತು. ಅಂತಿಮವಾಗಿ ಸುಪ್ರೀಂ ನೀಡಿರುವ ಆದೇಶದಂತೆ ನಿಯಮಗಳನ್ನು ಪಾಲಿಸಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೈದಿಗಳ  ಬಿಡುಗಡೆಗೆ ರಾಜ್ಯಪಾಲ ವಿ.ಆರ್.ವಾಲಾ ಅವರೂ ಮುಕ್ತ ಮನಸ್ಸು ಹೊಂದಿರುವುದರಿಂದ ಸಂಪುಟ ನಿರ್ಣಯಕ್ಕೆ ಅಂಕಿತ ಹಾಕುವ ಸಾಧ್ಯತೆ ಇದ್ದು, ಮಂಗಳವಾರ ಸಂಜೆ ಅಥವಾ ಬುಧವಾರ  ಕೈದಿಗಳು ಬಿಡುಗಡೆಯಾಗಲಿದ್ದಾರೆ.

ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಎಲ್ಲ ಅಡ್ಡಿಗಳು ನಿವಾರಣೆ ಆಗಿರುವುದರಿಂದ ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ 90, ವಿಜಯಪುರದಲ್ಲಿ 38, ಬೆಳಗಾವಿಯಲ್ಲಿ 114,  ಧಾರವಾಡ 10, ಮೈಸೂರು 42, ಕಲಬುರಗಿ  50 ಹಾಗೂ ಬಳ್ಳಾರಿ ಕಾರಾಗೃಹದಲ್ಲಿರುವ 23 ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು