ಪರಮೇಶ್ವರ ನಾಯ್ಕ್ 
ಪ್ರಧಾನ ಸುದ್ದಿ

ಪರಮೇಶ್ವರ ನಾಯ್ಕ್ ವರ್ಗಾವಣೆ ವಿವಾದ: ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶಣೈ ಅವರ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಶನಿವಾರ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು: ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶಣೈ ಅವರ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಶನಿವಾರ ಕಾಂಗ್ರೆಸ್‌ ಹೈಕಮಾಂಡ್‌ ಕೆಪಿಸಿಸಿಗೆ ಸೂಚಿಸಿದೆ.
ವರ್ಗಾವಣೆ ವಿವಾದದಲ್ಲಿ ಸಚಿವ ಪಿ.ಟಿ. ಪರಮೇಶ್ವರ್‌ ನಾಯ್ಕ್ ಅವರ ಪಾತ್ರವೇನು ಎಂಬುದರ ಬಗ್ಗೆ ವಿವರಣೆ  ನೀಡುವಂತೆ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ ಅವರಿಗೆ ಸೂಚಿಸಿದೆ.
ಕರೆ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಡಿವೈಎಸ್‌ಪಿಯನ್ನು  ನಾನೇ ವರ್ಗಾವಣೆ ಮಾಡಿಸಿದೆ ಎಂದು ಪರಮೇಶ್ವರ್‌ ನಾಯ್ಕ್ ಅವರು ಕಾರ್ಯಕರ್ತರ ಎದುರು ಹೇಳಿಕೊಂಡಿರುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದು ವಿವಾದದ ಕಾವು ಹೆಚ್ಚಲು ಕಾರಣವಾಗಿದೆ. ಇನ್ನು ಪ್ರತಿಪಕ್ಷಗಳು ಸಹ ಪ್ರಮುಖ ಅಸ್ತ್ರವನ್ನಾಗಿ ಬಳಸಲು ಮುಂದಾಗಿವೆ. 
ಈ ಮಧ್ಯೆ, ವಿಧಾನ ಸಭೆ ಉಪ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಚುನಾವಣೆಯಲ್ಲಿ ಪಕ್ಷಕ್ಕಾಗುವ ಮುಜುಗರ ಮತ್ತು ಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ನಾಯ್ಕ್ ಅವರ ರಾಜೀನಾಮೆ ಪಡೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್