ಕೂಡ್ಲಿಗಿ ಡಿವೈಎಸ್ಪಿಯಾಗಿ ಅನುಪಮಾ ಶೆಣೈ ಮರುನೇಮಕ
ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕೂಡ್ಲಿಗಿ ಜನತೆ ಪ್ರತಿಭಟನೆ...
ಬೆಂಗಳೂರು: ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕೂಡ್ಲಿಗಿ ಜನತೆ ಪ್ರತಿಭಟನೆ ನಡೆಸಿದ್ದು, ಜನತೆಯ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತನ್ನ ವರ್ಗಾವಣೆ ಆದೇಶವನ್ನು ಹಿಂಪಡೆದಿದೆ.
ಎಸ್ ಪಿ ಅನುಪಮಾ ಶೆಣೈ ವರ್ಗಾವಣೆಯನ್ನು ರದ್ದುಗೊಳಿಸಿರುವ ಸರ್ಕಾರ ಕೂಡ್ಲಿಗಿ ಡೈವೈಎಸ್ಪಿಯಾಗಿ ಮರುನೇಮಕ ಮಾಡಿ ಆದೇಶ ಹೊರಡಿಸಿದೆ.
ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆ ಸ್ವೀಕರಿಸದ ಕಾರಣಕ್ಕೆ ಐಪಿಎಸ್ ಅಧಿಕಾರಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಗೆ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಅಲ್ಲಿ ಅಧಿಕಾರ ಸ್ವೀಕರಿಸುವ ಮೊದಲೇ ಅವರಿಗೆ 15 ದಿನಗಳ ಕಾಲ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.