ಪ್ರಧಾನ ಸುದ್ದಿ

ಕಾಪು ಮೀಸಲಾತಿ ಪ್ರತಿಭಟನೆ ವಾಪಸ್, ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆಯ ಎಚ್ಚರಿಕೆ

Lingaraj Badiger
ವಿಶಾಖಪಟ್ಟಣಂ: ಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದ್ದು, ಒಂದು ವೇಳೆ ತಮ್ಮ ಬೇಡಿಕೆ ಈಡೇರದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಕಾಪು ಜನಾಂಗವನ್ನು ಹಿಂದೂಳಿದ ವರ್ಗಗಳ ಪಟ್ಟಿಗೆ ಸೇರಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಭರವಸೆ ನೀಡಿದ ನಂತರ ಕಾಪು ನಾಯಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಕಾಪು ಜನಾಂಗಕ್ಕೆ ಒಬಿಸಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಈಗಾಗಲೇ ನ್ಯಾಯಂಗ ಆಯೋಗವನ್ನು ರಚಿಸಲಾಗಿದೆ ಎಂದು ಚಂದ್ರಬಾಬು ನಾಯ್ಡು ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಇನ್ನು ಪ್ರತಿಭಟನೆ  ಹಿಂಸಾಚಾರಕ್ಕೆ ತಿರುಗಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಬಾಬು, ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಅಪರಾಧಿಗಳನ್ನು ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.
ಒಬಿಸಿ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿರುವುದಾಗಿ ಕಾಪು ಜನಾಂಗದ ನಾಯಕ ಎಂ.ಪದ್ಮನಾಭಂ ಅವರು ಭಾನುವಾರ ತಡರಾತ್ರಿ ಘೋಷಿಸಿದ್ದಾರೆ.
ಪಶ್ಚಿಮ ಗೋದಾವರಿ ಜಿಲ್ಲೆಯ ತುನಿ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ರ್ಯಾಲಿ ಇದ್ದಕ್ಕಿದ್ದಂತೆಯೇ ಹಿಂಸಾಚಾರಕ್ಕೆ ತಿರುಗಿತ್ತು. ನಿಲ್ದಾಣದಲ್ಲಿದ್ದ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನಾಕಾರರನ್ನು ತಡೆಯಲೆತ್ನಿಸಿದ ಹತ್ತಾರು ಪೊಲೀಸರಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
SCROLL FOR NEXT