ಪವನ್ ಕಲ್ಯಾಣ್ 
ಪ್ರಧಾನ ಸುದ್ದಿ

ಕಾಪು ಮೀಸಲಾತಿ ಪ್ರತಿಭಟನೆಗೆ ನಟ ಪವನ್ ಕಲ್ಯಾಣ ಬೆಂಬಲ

ಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಜನ ಸೇನಾ ಮುಖ್ಯಸ್ಥ ಟಾಲಿವುಡ್ ನಟ...

ವಿಶಾಖಪಟ್ಟಣಂ: ಒಬಿಸಿ ಮೀಸಲಾತಿಗೆ ಆಗ್ರಹಿಸಿ ಕಾಪು ನಾಯಕರು ಆಂಧ್ರ ಪ್ರದೇಶದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಜನ ಸೇನಾ ಮುಖ್ಯಸ್ಥ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ಬೆಂಬಲ ನೀಡಿದ್ದಾರೆ. ಆದರೆ ಪ್ರತಿಭಟನೆ ಶಾಂತಿಯುತವಾಗಿರಲಿ ಎಂದು ಸೋಮವಾರ ಹೇಳಿದ್ದಾರೆ.
ಕಾಪು ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದ ಹಿನ್ನೆಲೆಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಪು ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ನಾಯಕ ಹಾಗೂ ನಟ ಚಿರಂಜೀವಿ ಅವರ ಸಹೋದರ ಪವನ್ ಕಲ್ಯಾಣ್ ಅವರು, ತುನಿ ಹಿಂಸಾಚಾರ ಘಟನೆಯಿಂದ ನನಗೆ ನೋವಾಗಿದೆ. ಉತ್ತ ಆಂಧ್ರ ಹಾಗೂ ತೆಲಂಗಾಣದಲ್ಲಿ ಕಾಪು ಜನಾಂಗವನ್ನು ಹಿಂದೂಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ ರಾಯಲ್ ಸೀಮಾದಲ್ಲಿ ಮಾತ್ರ ಹಿಂದೂಳಿದ ವರ್ಗಕ್ಕೆ ಸೇರಿಸಿಲ್ಲ ಎಂದರು.
ತುನಿ ಘಟನೆ ದುರದೃಷ್ಟಕರ. ಆದರೆ ಪ್ರತಿಭಟನೆ ಶಾಂತಿಯುತವಾಗಿರುವಬೇಕು ಎಂದಿರುವ ನಟ, ಶಾಂತಿ ಸುವ್ಯ.ವಸ್ಥೆಗಾಗಿ ಟಿಡಿಪಿ ಸರ್ಕಾರ ಯಾವುದೇ ಹೆಚ್ಚಿನ ಕ್ರಮ ತೆಗೆದುಕೊಳ್ಳದಿರುವುದು ಅಚ್ಚರಿ ಮೂಡಿಸಿದೆ ಎಂದಿದ್ದಾರೆ.
ರೈಲಿಗೆ ಬೆಂಕಿ ಹಚ್ಚಿರುವ ಕೃತ್ಯದ ಹಿಂದೆ ಸಮಾಜ ವಿರೋಧಿಗಳ ಕೈವಾಡ ಇರುವ ಸಾಧ್ಯತೆ ಎಂದು ಪವನ್ ಕಲ್ಯಾಣ್ ಹೇಳಿದರು.
ಪಶ್ಚಿಮ ಗೋದಾವರಿ ಜಿಲ್ಲೆಯ ತುನಿ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ರ್ಯಾಲಿ ಇದ್ದಕ್ಕಿದ್ದಂತೆಯೇ ಹಿಂಸಾಚಾರಕ್ಕೆ ತಿರುಗಿತ್ತು. ನಿಲ್ದಾಣದಲ್ಲಿದ್ದ ರತ್ನಾಂಚಲ ಎಕ್ಸ್ ಪ್ರೆಸ್ ರೈಲಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನಾಕಾರರನ್ನು ತಡೆಯಲೆತ್ನಿಸಿದ ಹತ್ತಾರು ಪೊಲೀಸರಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
ಈ ಮಧ್ಯೆ ಕಾಪು ಜನಾಂಗವನ್ನು ಹಿಂದೂಳಿದ ವರ್ಗಗಳ ಪಟ್ಟಿಗೆ ಸೇರಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಭರವಸೆ ನೀಡಿದ ನಂತರ ಕಾಪು ನಾಯಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಕಾಪು ಜನಾಂಗಕ್ಕೆ ಒಬಿಸಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಈಗಾಗಲೇ ನ್ಯಾಯಂಗ ಆಯೋಗವನ್ನು ರಚಿಸಲಾಗಿದೆ ಎಂದು ಚಂದ್ರಬಾಬು ನಾಯ್ಡು ಅವರು ವರದಿಗಾರರಿಗೆ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ